News Kannada
Friday, September 30 2022

ಕರಾವಳಿ

ರಾಜ್ಯ ಸರ್ಕಾರದ ವಿರುದ್ಧ ಬಂಟ್ವಾಳದಲ್ಲಿ ಪ್ರತಿಭಟನೆ - 1 min read

Photo Credit :

ರಾಜ್ಯ ಸರ್ಕಾರದ ವಿರುದ್ಧ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜ್ಯ ಸರ್ಕಾರ ಬಡವರ, ಕೂಲಿ ಕಾರ್ಮಿಕರ, ಕೃಷಿಕರ, ನೆರೆಪೀಡಿತರ ಮತ್ತು ಜನಸಾಮಾನ್ಯರ ಪರವಾಗಿಲ್ಲ ಎಂದು ಆರೋಪಿಸಿ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಅಂತ್ಯಸಂಸ್ಕಾರಕ್ಕೆ ನೀಡುವ ಹಣವನ್ನೂ ಒದಗಿಸಲು ಆಗಿಲ್ಲ, ಬಡವರಿಗೆ ಒಂದೇ ಒಂದು ಮನೆ ನೀಡದೆ, ಜಾಹೀರಾತು ಮೂಲಕ ಪ್ರಚಾರ ಗಿಟ್ಟಿಸಿಕೊಂಡಿದೆ ಎಂದರು.

ಬಡವರ, ಕೂಲಿಕಾರ್ಮಿಕರ, ನೆರೆ ಪೀಡಿತರಿಗೆ ಹಾಗೂ ಜನಸಾಮಾನ್ಯರಿಗೆ ಸರ್ಕಾರ ತಲುಪೇ ಇಲ್ಲ, ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರದ ಪಾಲು ಇತ್ತು ಎಂಬುದನ್ನು ಜ್ಞಾಪಿಸದ ಬಿಜೆಪಿಯವರು, ಬಳಿಕ ಮೋದಿ ಸರ್ಕಾರ ಬಂದಾಗ, ಸಿದ್ಧರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಉಚಿತ ಸವಲತ್ತು ನೀಡಿದಾಗ ಅದರಲ್ಲಿ ಕೇಂದ್ರದ ಪಾಲೂ ಇದೆ ಎಂದರು. ವಾಸ್ತವವಾಗಿ ಉಚಿತ ಅಕ್ಕಿ ಯೋಜನೆಯನ್ನು ಜಾರಿಗೆ ತಂದದ್ದೇ ಕಾಂಗ್ರೆಸ್ ಸರ್ಕಾರ. ಇಂದಿರಾ ಕ್ಯಾಂಟೀನ್, ಭೂಮಸೂದೆಯಂಥ ಕಾನೂನುಗಳ ಮೂಲಕ ಬಡವರ ಪರವಾಗಿದ್ದರೆ, ಬಿಜೆಪಿಯವರು ಕೇವಲ ಟೀಕೆ ಮಾಡುವುದರಲ್ಲೇ ಕಾಲ ಕಳೆದರು. ಕೇಂದ್ರ, ರಾಜ್ಯಗಳೆರಡರಲ್ಲೂ ಅಧಿಕಾರ ಹೊಂದಿದರೂ ಯಾವುದೇ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ, ಭರವಸೆಗಳು ಹಾಗೂ ಮಾಧ್ಯಮಗಳಲ್ಲಿ ಪ್ರಚಾರ ನೀಡುವ ಮೂಲಕ ಜನರ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ. ಬಿಜೆಪಿ ಸರಕಾರ ಬಂದ ಬಳಿಕ ಯಾವೊಬ್ಬ ಬಡವನಿಗೂ ಮನೆ ಸಿಕ್ಕಿಲ್ಲ. ಕಳೆದ ಎರಡು ವರ್ಷದಿಂದ ಅಂತ್ಯ ಸಂಸ್ಕಾರಕ್ಕೆ ನೀಡುವ ಹಣವನ್ನೂ ಈ ಸರಕಾರ ನೀಡುತ್ತಿಲ್ಲ, ಪೊಲೀಸರಿಗೆ ನೀಡುತ್ತಿದ್ದ ಭತ್ಯೆಯನ್ನೂ ನಿಲ್ಲಿಸಿದ್ದು, ಕೇವಲ ಘೋಷಣೆಯನ್ನಷ್ಟೇ ಮಾಡುತ್ತಿದೆ ಎಂದು ಆರೋಪಿಸಿದರು. ಮರಳುಗಾರಿಕೆಯು ಅನಧಿಕೃತವಾಗಿ ನಡೆಯುತ್ತಿದೆ. 2 ಸಾವಿರ ರೂಪಾಯಿಗೆ ಮರಳು ಎಂದು ಒಂದು ದಿನ ಹೇಳಿದರು, ಬಳಿಕ ಹಾಗಲ್ಲ ಎಂದು ವರಸೆ ಬದಲಾಯಿಸಿದರು ಎಂದು ಲೇವಡಿ ಮಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಜಿ.ಪಂ. ಸದಸ್ಯ ಎಂ.ಎಸ್ ಮಹಮ್ಮದ್ ಮಾತನಾಡಿ, ಪಕ್ಷ ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಶೇಖರ ಪೂಜಾರಿ, ಸುರ್ದಶನ ಜೈನ್, ಬಿ.ಎಂ.ಅಬ್ಬಾಸ್ ಆಲಿ, ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಸದಾಶಿವ ಬಂಗೇರ, ಪದ್ಮನಾಭ ರೈ, ಪ್ರಶಾಂತ್ ಕುಲಾಲ್, ಮಾಯಿಲಪ್ಪ ಸಾಲ್ಯಾನ್, ಚಿತ್ತರಂಜನ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಲೋಲಾಕ್ಷ ಶೆಟ್ಟಿ, ಲುಕ್ಮಾನ್, ವೆಂಕಪ್ಪ ಪೂಜಾರಿ, ಜನಾರ್ದನ ಚೆಂಡ್ತಿಮಾರ್, ಜೆಸಿಂತ ಡಿಸೋಜಾ, ಜಗದೀಶ್ ಕುಂದರ್, ಐಡಾ ಸುರೇಶ್, ಮಹಮ್ಮದ್ ನಂದರಬೆಟ್ಟು, ವಿನಯ ಕುಮಾರ್, ಮಧುಸೂದನ್ ಶೆಣೈ, ಸಂಜೀವ ಪೂಜಾರಿ, ವಾಸು ಪೂಜಾರಿ, ಗಂಗಾಧರ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

See also  ಉಪ್ಪಳದಲ್ಲಿ ಗೂಂಡಾ ತಂಡಗಳ ನಡುವೆ ಗುಂಡಿನ ಕಾಳಗ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು