News Kannada
Monday, October 03 2022

ಕರಾವಳಿ

ಆತ್ಮಹತ್ಯೆಗೆ ಯತ್ನಿಸಿದ್ದ ಕುಟುಂಬದ ಮೂವರೂ ಸಾವು - 1 min read

Photo Credit :

ಆತ್ಮಹತ್ಯೆಗೆ ಯತ್ನಿಸಿದ್ದ ಕುಟುಂಬದ ಮೂವರೂ ಸಾವು

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲೂಕಿನ ಕೊಕ್ರಾಡಿ ಗ್ರಾಮದ ಅತ್ರಿಜಾಲು ಸಮೀಪದ ನಿವಾಸಿ ಚೇತನ್‌ (35) ಹಾಗೂ ಅವರ ಪುತ್ರಿ ತ್ರಿಶಾ ಹಾಗೂ ಅವರ ಪತ್ನಿ ಆಶಾ (30) ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸೋಮವಾರ ಮನೆಯೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತು. ತ್ರಿಶಾ ಸೋಮವಾರ ರಾತ್ರಿಯೇ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಚೇತನ್‌ ಅವರು ಮಂಗಳವಾರ ಬೆಳಿಗ್ಗೆ ಸಾವನ್ನಪ್ಪಿದ್ದು ಕೆಲವೇ ಹೊತ್ತಿನಲ್ಲಿ ಅವರ ಪತ್ನಿ ಆಶಾಳು ಮೃತಪಟ್ಟಿದ್ದಾರೆ.

ಇವರ ಆತ್ಮಹತ್ಯೆಗೆ ಕುಟುಂಬದ ಒಳಗಿನ ಸಮಸ್ಯೆಯೇ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಮೃತ ಚೇತನ್ ಅವರು ತಮ್ಮ ಡೈರಿಯಲ್ಲಿ ತನ್ನ ಸಾವಿಗೆ ತಾನೇ ಕಾರಣ ಎಂದು ಬರೆದಿರುವುದಾಗಿ ತಿಳಿದುಬಂದಿದೆ. ಅಡಿಕೆ ಮಾರಿದ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರ ನಡುವೆ ವಿವಾದ ಸೃಷ್ಟಿಯಾಗಿತ್ತು ಎನ್ನಲಾಗಿದೆ. ಇದರ ಮುಂದುವರಿದ ಭಾಗವಾಗಿ ಆಸ್ತಿಯನ್ನು ಪಾಲು ಮಾಡಲು ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಆದರೆ ಆಸ್ತಿ ಪಾಲು ಮಾಡುವುದಕ್ಕೂ ಮೊದಲೇ ಚೇತನ್ ತನ್ನ ಕುಟುಂಬದೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬೆಳ್ತಂಗಡಿ ವೃತ್ತನಿರೀಕ್ಷಕ ಸಂದೇಶ್ ಮಾರ್ಗದರ್ಶನ ದಲ್ಲಿ ತನಿಖೆ ನಡೆಯುತ್ತಿದೆ.

See also  ಸೇವಾ ಮನೋಭಾವಕ್ಕೆ ಸಂಕೋಚಪಡಬೇಡಿ :ಡಾ. ಹೆಗ್ಗಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು