ಸುಳ್ಯ: ಮದುವೆ ದಿಬ್ಬಣದ ಖಾಸಗಿ ಬಸ್ ಕೇರಳದ ಪಾಣತ್ತೂರು ಬಳಿ ಉರುಳಿಬಿದ್ದು, 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುತ್ತೂರು ಕಡೆಯಿಂದ ಸುಳ್ಯ ಆಲೆಟ್ಟಿ ಮೂಲಕ ಪಾಣತ್ತೂರು ಕಡೆಗೆ ಈ ದಿಬ್ಬಣದ ಬಸ್ ಹೋಗುತ್ತಿತ್ತು ಎಂದು ವರದಿಗಳು ತಿಳಿಸಿವೆ.
ಕೊಡಗಿನಲ್ಲಿನ ಮದುವೆಯ ಕಾರ್ಯಕ್ರಮಕ್ಕೆಂದು ಕಲ್ಲಪಳ್ಳಿ ಪಾಣತ್ತೂರು ಮೂಲಕ ಈ ಬಸ್ ಸಾಗುತ್ತಿತ್ತು ಎಂದು ಹೇಳಲಾಗಿದ್ದು, ಪಾಣತ್ತೂರು ಬಳಿ ಇರುವ ಗುಡ್ಡಗಾಡು ಪ್ರದೇಶದಲ್ಲಿ ಆಯತಪ್ಪಿ ಬಸ್ ಬಿದ್ದು ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಈ ದಿಬ್ಬಣದ ಬಸ್ಸಿನಲ್ಲಿ ಸುಮಾರು 60 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಘಟನೆಯಲ್ಲಿ ಒಂದು ಮಗು ಸೇರಿದಂತೆ ಐವರು ಮೃತಪಟ್ಟಿದ್ದು ಸುಮಾರು 20 ಮಂದಿ ಗಾಯಗೊಂಡಿದ್ದಾರೆ ಎಂಬ ವರದಿ ಲಭಿಸಿದೆ.