News Kannada
Friday, October 07 2022

ಕರಾವಳಿ

ರಾಮಮಂದಿರ ನಿರ್ಮಾಣಕ್ಕೆ 1 ಕೋಟಿ ಸಮರ್ಪಿಸಿದ ಎಸ್ ಸಿಡಿಸಿಸಿ ಬ್ಯಾಂಕ್ ಮತ್ತು ನವೋದಯ ಸ್ವ ಸಹಾಯ ಸಂಘ - 1 min read

Photo Credit :

ರಾಮಮಂದಿರ ನಿರ್ಮಾಣಕ್ಕೆ 1 ಕೋಟಿ ಸಮರ್ಪಿಸಿದ ಎಸ್ ಸಿಡಿಸಿಸಿ ಬ್ಯಾಂಕ್ ಮತ್ತು ನವೋದಯ ಸ್ವ ಸಹಾಯ ಸಂಘ

ಉಡುಪಿ: ಎಸ್ ಸಿಡಿಸಿಸಿ ಬ್ಯಾಂಕ್ ಮತ್ತು ನವೋದಯ ಸ್ವ ಸಹಾಯ ಸಂಘಗಳ ಮೂಲಕ ಒಟ್ಟು 1,01,11,072 ಮೊತ್ತವನ್ನು ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಪೇಜಾವರ ಸ್ವಾಮೀಜಿಯವರಿಗೆ ಹಸ್ತಾಂತರಿಸಲಾಯಿತು.

ಬುಧವಾರ ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ನಡೆದ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಗುರುವಂದನೆ ಹಾಗೂ ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣೆ ಮತ್ತು ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರ 72 ರ ಹುಟ್ಟುಹಬ್ಬ ಸಂಭ್ರಮದ ಅಭಿವಂದನಾ ಕಾರ್ಯಕ್ರಮದಲ್ಲಿ ಈ ಕಾರ್ಯ ನಡೆಯಿತು.

ಇದೇ ಸಂದರ್ಭದಲ್ಲಿ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿದ್ದು, ಶ್ರೀರಾಮನಂತೆ ನಾವೆಲ್ಲರೂ ಬದುಕಬೇಕು. ಸಮಾಜದಲ್ಲಿ ನಾವೆಲ್ಲ ಹೇಗೆ ಬದುಕು ಸಾಗಿಸಬೇಕು ಎಂಬುದಕ್ಕೆ ಶ್ರೀರಾಮ ಆದರ್ಶ. ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯವಾದ ಶ್ರೀರಾಮ ಮಂದಿರ ಭಾರತದ ಸಂಸ್ಕೃತಿಯ ಪ್ರತೀಕವಾಗಿ ಮೂಡಿ ಬರಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ , ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ , ಗಣಿ ಹಾಗೂ ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಮತ್ತಿತರರು ಉಪಸ್ಥಿತರಿದ್ದರು .

See also  ಬೆಳ್ತಂಗಡಿಯ ಯುವಕ ಬಳ್ಳಾರಿಯಲ್ಲಿ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು