News Kannada
Saturday, December 03 2022

ಕರಾವಳಿ

ಕುಸಿದ‌ ಧರೆ: ತೋಟದಲ್ಲಿ ಕಾರ್ಯನಿತರ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತ್ಯು

Photo Credit :

ಕುಸಿದ‌ ಧರೆ: ತೋಟದಲ್ಲಿ ಕಾರ್ಯನಿತರ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತ್ಯು

ಕಾರವಾರ:ತೋಟದ ಬಳಿ ಮಣ್ಣಿನ ಕೆಲಸ ಮಾಡುವಾಗ ಗುಡ್ಡದ ಮಣ್ಣು ಕುಸಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಇಡಗುಂದಿ ಬಳಿ ನಡೆದಿದೆ.

ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂತೇಬೈಲ್ ನ ಮಂಜುನಾಥ ಭಟ್ಟ ಎಂಬುವವರ ಮಾಲೀಕತ್ವದ ತೋಟದ ಕೆಲಸಕ್ಕೆಂದು ಏಳು ಮಂದಿ ಕಾರ್ಮಿಕರು ತೆರಳಿದ್ದರು. ಧರೆ ಅಗೆದು ತೋಟಕ್ಕೆ ಮಣ್ಣು ಹಾಕುತ್ತಿದ್ದ ವೇಳೆಗೆ ಧರೆ ಮಣ್ಣು ಕಾರ್ಮಿಕರ ಮೇಲೆ ಕುಸಿದಿದೆ.

ಈ ವೇಳೆ ಯಲ್ಲಾಪುರ ತಾಲೂಕಿನ ಕಿರವತ್ತಿ ಸಮೀಪದ ಗೌಳಿವಾಡದ ನಿವಾಸಿಗಳಾದ ಭಾಗ್ಯಶ್ರೀ ಎಡಗೆ (21), ಲಕ್ಷ್ಮೀ ಡೋಯಿಪಡೆ (38), ಸಂತೋಷ್ ಡೋಯಿಪಡೆ (18) ಹಾಗೂ ಮಾಳು ಡೋಯಿಪಡೆ (21) ಅವರ ಮೇಲೆ ಮಣ್ಣು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ತಗ್ಗಿಬಾಯಿ, ಸೋನಿ ಹಾಗೂ ಬೀರು ಎನ್ನುವವರು ಈ ವೇಳೆ ಅಪಾಯದಿಂದ ಪಾರಾಗಿದ್ದಾರೆ.

ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹಗಳನ್ನು ಹೊರಕ್ಕೆ ತೆಗದು ಮರಣೋತ್ತರ ಪರೀಕ್ಷೆಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

See also  ಬಜರಂಗದಳ ಮುಖಂಡನಿಗೆ ಬೆದರಿಕೆ ಕರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು