News Kannada
Saturday, November 26 2022

ಕರಾವಳಿ

ದಕ್ಷಿಣ ಕನ್ನಡ- ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಅಪಘಾತ - 1 min read

Photo Credit :

ದಕ್ಷಿಣ ಕನ್ನಡ- ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಅಪಘಾತ

ಮಂಗಳೂರು : ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಕಂಟೈನರ್ ಲಾರಿ ಮತ್ರು ಖಾಸಗಿ ಬಸ್ಸು ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ಲಾರಿ ಚಾಲಕ ಲಾರಿಯಿಂದ ಹೊರಬರಲಾಗದೇ ಸಜೀವ ದಹನಗೊಂಡ ಘಟನೆ ಮಾ.24 ತಡರಾತ್ರಿ ಸಂಭವಿಸಿದೆ.

ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ಸು ಮತ್ತು ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಮುಖಾಮುಖಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯವನ್ನರಿತು ಕೆಳಗಿಳಿದು ಪಾರಾಗಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಾಗಿ ಎರಡೂ ವಾಹನಗಳು ಸುಟ್ಟು ಭಸ್ಮವಾಗಿದ್ದು, ಲಾರಿ ಚಾಲಕ ಮಾತ್ರ ಲಾರಿಯೊಳಗೆ ಸಿಲುಕಿ ಹೊರಬರಲಾಗದೆ ಸಜೀವ ದಹನವಾಗಿರುವುದಾಗಿ ಮಾಹಿತಿ ಲಭಿಸಿದೆ.

ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

See also  ಟಿಪ್ಪರ್-ಓಮಿನಿ ನಡುವೆ ಭೀಕರ ಅಪಘಾತ : ಆರು ಮಂದಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು