News Kannada
Tuesday, November 29 2022

ಕರಾವಳಿ

ಜಲ್ಲಿಕಲ್ಲು – ಶಿಲೆಕಲ್ಲಿ ಸಾಗಾಟ ನಿರ್ಬಂಧ ತೆರವುಗೊಳಿಸಲು ಕೋರಿ ಮುಖ್ಯಮಂತ್ರಿಗಳ ಭೇಟಿ ಮಾಡಿದ ನಿಯೋಗ - 1 min read

Photo Credit :

ಜಲ್ಲಿಕಲ್ಲು - ಶಿಲೆಕಲ್ಲಿ ಸಾಗಾಟ ನಿರ್ಬಂಧ ತೆರವುಗೊಳಿಸಲು ಕೋರಿ ಮುಖ್ಯಮಂತ್ರಿಗಳ ಭೇಟಿ ಮಾಡಿದ ನಿಯೋಗ

ದಕ್ಷಿಣ ಕನ್ನಡ: ಜಲ್ಲಿಕಲ್ಲು ಹಾಗೂ ಶಿಲೆಗಳ ಸಾಗಾಟಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಇಂದು ಶಾಸಕ ವೇದವ್ಯಾಸ್ ಕಾಮತ್, ಉಡುಪಿ ಶಾಸಕರಾದ ರಘುಪತಿ ಭಟ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕ್ವಾರಿ ಮಾಲಕರು, ಕ್ರಷರ್ ಮಾಲಕರು, ಕಟ್ಟಡ‌ ಸಾಮಾಗ್ರಿ ಲಾರಿ ಟೆಂಪೋ ಮಾಲಕರ ಸಂಘದ ಪದಾಧಿಕಾರಿಗಳ ನಿಯೋಗವು ಗಣಿ ಮತ್ತು ಭೂವಿಜ್ಞಾನ ಸಚಿವರಾಗ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಜಲ್ಲಿಕಲ್ಲು ಹಾಗೂ ಶಿಲೆಕಲ್ಲುಗಳ ಸಾಗಾಟಕ್ಕೆ ನಿರ್ಬಂಧ ಹೇರಿರುವ ಕಾರಣ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತವಾಗಿರುವ ಕುರಿತು ಚರ್ಚೆ ನಡೆಯಿತು.

ಜಲ್ಲಿಕಲ್ಲು ಸಿಗದೆ ಅನೇಕ ಕಾಮಗಾರಿಗಳು ಸ್ಥಗಿತವಾಗಿದೆ. ಮಾತ್ರವಲ್ಲದೆ ಜನ ಸಾಮಾನ್ಯರಿಗೂ ಇದರಿಂದ ವಿಪರೀತ ಸಮಸ್ಯೆಯಾಗುತ್ತಿದೆ. ಹಾಗಾಗಿ ನಿರ್ಬಂಧ ತೆರವುಗೊಳಿಸುವಂತೆ ನಿಯೋಗವು ಗಣಿ ಹಾಗೂ ಭೂ ವಿಜ್ಞಾನ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಸಮಸ್ಯೆ ಆಲಿಸಿದ ಸಚಿವರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಿಯೋಗದೊಂದಿಗೆ ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿಸಿ ಸಮಸ್ಯೆಯ ಕುರಿತು ಗಮನ ಸೆಳೆದರು.

ಸಮಸ್ಯೆಯ ಗಂಭೀರತೆಯನ್ನು ಅರಿತ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜಲ್ಲಿಕಲ್ಲು ಹಾಗೂ ಶಿಲೆಕಲ್ಲು ಸಾಗಾಟಕ್ಕೆ ಅವಕಾಶ ನೀಡುವ ಕುರಿತು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

See also  ಬಶೀರ್, ದೀಪಕ್ ರಾವ್ ಹತ್ಯೆಗೆ ಕುಮ್ಮಕ್ಕು ನೀಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ: ಮಿಥುನ್ ರೈ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು