News Kannada
Friday, December 02 2022

ಕರಾವಳಿ

ಕೋವಿಡ್ ನಿಯಮಗಳನ್ನು ಪ್ರತಿಯೊಬ್ಬರು ಚಾಚೂತಪ್ಪದೆ ಪಾಲಿಸಿ: ಡಾ. ರಾಜೇಂದ್ರ.ಕೆ.ವಿ.

Photo Credit :

ಕೋವಿಡ್ ನಿಯಮಗಳನ್ನು ಪ್ರತಿಯೊಬ್ಬರು ಚಾಚೂತಪ್ಪದೆ ಪಾಲಿಸಿ: ಡಾ. ರಾಜೇಂದ್ರ.ಕೆ.ವಿ.

ಮಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿದ್ದು ಇವುಗಳ ನಿಯಂತ್ರಣಕ್ಕೆ ಸರ್ಕಾರ ಹೊರಡಿಸುವ ಮಾರ್ಗಸೂಚಿಗಳನ್ನು ಸೇರಿದಂತೆ ನಿಯಮಗಳನ್ನು ಚಾಚೂತಪ್ಪದೆ ಪಾಲಿಸಿ ಸೋಂಕು ನಿಯಂತ್ರಣಕ್ಕೆಪ್ರತಿಯೊಬ್ಬರು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ. ತಿಳಿಸಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಸೋಂಕುವಿನ ಪ್ರಕರಣಗಳು ಹೆಚ್ಚಾಗುತ್ತಿವೆ, ಇವುಗಳ ನಿಯಂತ್ರಣಕ್ಕೆ ಸರ್ಕಾರ ಹೊಸ ಹೊಸ ಮಾರ್ಗಸೂಚಿಗಳನ್ನು ಆಗಿಂದಾಗೆ ಹೊರಡಿಸುತ್ತಿದ್ದು. ಜಿಲ್ಲೆಯ ಸಾರ್ವಜನಿಕರು ಅವುಗಳನ್ನು ಪಾಲಿಸುವುದರೊಂದಿಗೆ ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ಆರೋಗ್ಯ ಇಲಾಖೆಯವರು ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದರೊಂದಿಗೆ ಸೋಂಕಿತರನ್ನು ಗುರುತಿಸಿ ಚಿಕಿತ್ಸೆ ನೀಡಬೇಕು ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರನ್ನು ಗುರುತಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದರು.

ಕರೋನ ಕರ್ಫ್ಯೂ ನಿಯಮಗಳು ಸೇರಿದಂತೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವಿಕೆ ಕಡ್ಡಾಯವಾಗಿದ್ದು,
ಪ್ರತಿಯೊಬ್ಬರು ಚಾಚು ತಪ್ಪದೆ ಪಾಲಿಸಬೇಕು ತಪ್ಪಿದ್ದಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರೊಂದಿಗೆ ದಂಡ ವಿಧಿಸಬೇಕು ಎಂದರು.

ವಿಪತ್ತು ನಿರ್ವಹಣೆ ಕಾಯ್ದೆಯ ಅನ್ವಯ ಕೊರೋನ ಕರ್ಫ್ಯೂ ಅನ್ನು ಇಂದಿನಿಂದ ಏಪ್ರಿಲ್ 20 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಗೊಳಿಸಲಾಗಿದ್ದು,
ಈ ಸಂದರ್ಭದಲ್ಲಿ ಕೆಲವು ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿದ್ದು ಉಳಿದಂತೆ ಎಲ್ಲ ಸೇವೆಗಳನ್ನು ಹಾಗೂ ಸಂಚಾರಗಳನ್ನು ನಿಷೇಧಿಸಲಾಗಿದೆ ಎಂದರು.

ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿಸಿದೆ. ದೂರ ಸಂಪರ್ಕ ಮತ್ತು ಅಂತರ್ಜಾಲ ಸೇವೆ ಸಂಸ್ಥೆಗಳು ಹಾಗೂ ಮಾಹಿತಿ ತಂತ್ರಜ್ಞಾನ ಆಧಾರಿತ ಸಂಸ್ಥೆಗಳ ಸಿಬ್ಬಂದಿಗಳು ರಾತ್ರಿ ಪಾಳಿಯಲ್ಲಿ ಕಚೇರಿ ಗುರುತಿನ ಚೀಟಿ ಹೊಂದಿ ಸಂಚರಿಸಬಹುದು ಎಂದರು.

ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತಹ ಎಲ್ಲಾ ಕಾರ್ಖಾನೆಗಳು, ಕಂಪನಿಗಳು ಹಾಗೂ ಸಂಸ್ಥೆಗಳು ಯಥಾರೀತಿ ಕಾರ್ಯನಿರ್ವಹಿಸಲು ಅನುಮತಿಸಿದೆ .ಕಾರ್ಮಿಕರು ಹಾಗೂ ನೌಕರರು ಕರ್ಫ್ಯೂ ಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರಿರಬೇಕು ಎಂದರು.

ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು ಹಾಗೂ ವಿಮಾನದಲ್ಲಿ ದೂರ ಪ್ರಯಾಣಕ್ಕೆ ಅನುಮತಿಸಿದ್ದು, ಪ್ರಯಾಣಿಕರು ಅಧಿಕೃತ ಟಿಕೇಟ್ ಗಳನ್ನು ತೋರಿಸಿ ಸಂಚರಿಸಬಹುದು ಎಂದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಪಿಡಿಓಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ ಸೋಂಕಿತ ವ್ಯಕ್ತಿಗಳು ಹೋಂ ಐಸೋಲೇಶನ್ ನಲ್ಲಿ ಇರುವಾಗ ಅವರ ಮೇಲೆ ನಿಗಾ ವಹಿಸಬೇಕು ಹಾಗೂ 45 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ ಕೋವಿಡ್ ರೋಗನಿರೋಧಕ ಲಸಿಕೆಯನ್ನು ಪಡೆದುಕೊಳ್ಳುವಂತೆ ಸೂಚಿಸಬೇಕು ಎಂದರು.

ಕೋವಿಡ್ ಸಂಬಂಧಿತ ಜನ ಜಾಗೃತಿ ಕಾರ್ಯಕ್ರಮಗಳು ಹಾಗೂ ಬೀದಿನಾಟಕಗಳನ್ನು ಮಾಡುವುದರ ಮೂಲಕ ಜನರಿಗೆ ಅರಿವು ಮೂಡಿಸಬೇಕು ಎಂದರು.

ಎಲ್ಲಾ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಪೂರಕ ಔಷಧಿ ಸೇರಿದಂತೆ ಮತ್ತಿತರ ಉಪಕರಣಗಳನ್ನು ಕೊರತೆಯಾಗದಂತೆ ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದರು.

See also  ಮಂಗಳೂರು: ತಡೆಗೋಡೆ ಕುಸಿದು ಕಾರ್ಮಿಕ ಸಾವು; ಇಬ್ಬರು ಪಾರು

ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಇಬ್ಬರು ಹೋಂ ಗಾರ್ಡ್ ಗಳನ್ನು ನಿಯೋಜಿಸಿ, ಬೇರೆ ರಾಜ್ಯ, ಜಿಲ್ಲೆಗಳಿಂದ ಈ ಜಿಲ್ಲೆಗೆ ಬರುವ ವ್ಯಕ್ತಿಗಳಿಗೆ ಕೋವಿಡ್ ನೆಗೆಟಿವ್ ವರದಿ ತರುವಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು