News Kannada
Wednesday, October 05 2022

ಕರಾವಳಿ

ಕೊರೋನ ಭೀತಿಯ ನಡುವೆಯೂ ತರಗತಿ ಆರಂಭ, ಅಧಿಕಾರಿಗಳಿಗೆ ಫೋಟೋ ಕಳಿಸಿದ ವಿದ್ಯಾರ್ಥಿಗಳು! - 1 min read

Photo Credit :

ಕೊರೋನ ಭೀತಿಯ ನಡುವೆಯೂ ತರಗತಿ ಆರಂಭ, ಅಧಿಕಾರಿಗಳಿಗೆ ಫೋಟೋ ಕಳಿಸಿದ ವಿದ್ಯಾರ್ಥಿಗಳು!

ಮಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಜನ ಸೇರುವ ಎಲ್ಲಾ ಕಾರ್ಯಕ್ರಮಗಳನ್ನು, ಶಾಪಿಂಗ್ ಮಾಲ್, ಶಾಲಾ-ಕಾಲೇಜುಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ.

ಮಂಗಳೂರು ನಗರದಲ್ಲಿ ಮಾತ್ರ ಕಾಲೇಜುಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ನಡೆಸಲಾಗುತ್ತಿತ್ತು. ದೇರಳಕಟ್ಟೆಯಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಮತ್ತು ಮುಕ್ಕ ಶ್ರೀನಿವಾಸ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ.

ಕ್ಲಾಸ್‌ಗೆ ಬರುವಂತೆ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ತಿಳಿಸಿದ್ದು ಒಂದೇ ಕೊಠಡಿಯಲ್ಲಿ ನೂರಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಕೂರಿಸಿಕೊಂಡು ಪಾಠ ಮಾಡಲಾಗುತ್ತಿದೆ.

ಮೆಡಿಕಲ್ ವಿಭಾಗದ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ಎಂಬಿಬಿಎಸ್, ಬಿಪಿಟಿ, ಬಿಎಸ್ಸಿ ನರ್ಸಿಂಗ್, ಮತ್ತು ಎಂಎಲ್ಟಿ ಕ್ಲಾಸ್ ಗಳು ನಡೆಯುತ್ತಿದೆ. ಈ ಕಾಲೇಜಿನಲ್ಲಿ ಕೇರಳ- ಮತ್ತು ಕರ್ನಾಟಕದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳೇ ಅಧಿಕವಾಗಿದ್ದು, ಭಯದಿಂದಲೇ ಕ್ಲಾಸ್‌ ಕೇಳುವಂತಾಗದೆ.

ಕ್ಲಾಸ್ ನಡೆಯುತ್ತಿರುವ ಬಗ್ಗೆ ವಿದ್ಯಾರ್ಥಿಗಳೇ ಕ್ಲಾಸ್ ರೂಂ ಫೋಟೋ ತೆಗೆದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕಳುಹಿಸಿದ್ದಾರೆ.ಸರ್ಕಾರದ ನಿಯಮ ಉಲ್ಲಂಘನೆ ಬಗ್ಗೆ ಅಧಿಕಾರಿಗಳ ಗಮನ ಸೆಳೆದಿದ್ದಾರೆ. ಈ ಬಗ್ಗೆ ಪಕ್ರಟಣೆ ಹೊರಡಿಸಿರುವ ಅಧಿಕಾರಿಗಳು ಕಾಲೇಜುಗಳು ಸರ್ಕಾರದ ನಿಯಮಗಳನ್ನು ಕಡ್ಡಾಯ ವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳನ್ನು ಕಾಲೇಜಿಗೆ ಬರುವಂತೆ ಒತ್ತಾಯ ಮಾಡಬಾರದು. ಶಿಕ್ಷಕರು ಮಾತ್ರ ಕಾಲೇಜಿಗೆ ಬಂದು ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 4 ರವರೆಗೆ ಕಾಲೇಜುಗಳಲ್ಲಿ ತರಗತಿಗಳು ನಡೆಯಬಾರದು. ತರಗತಿ ನಡೆಸಿದರೆ ಅಂತಹ ಶಿಕ್ಷಣ ಸಂಸ್ಥೆಗಳ‌ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.

See also  ರಸ್ತೆ ಬದಿಯಲ್ಲಿ ಧರೆಶಾಯಿಯಾಗುವ ಅಪಾಯಕಾರಿ ಮರಗಳು: ಅಧಿಕಾರಿಗಳ ನಿರ್ಲಕ್ಷ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು