News Kannada
Thursday, December 01 2022

ಕರಾವಳಿ

ಕೇಂದ್ರದಲ್ಲಿರುವ ಜಿಲ್ಲೆಯ ಯೋಜನೆಗಳು ಶೀಘ್ರ ಪೂರ್ಣ: ಕೇಂದ್ರ ಸಚಿವೆ ಶೋಭಾಕರಂದ್ಲಾಜೆ

Photo Credit :

ಉಡುಪಿ: ಕೇಂದ್ರ ಸರ್ಕಾರದ ಮಟ್ಟದಲ್ಲಿ ಮಂಜೂರಾತಿಗೆ ಬಾಕಿ ಇರುವ ಜಿಲ್ಲೆಯ ವಿವಿಧ ಯೋಜನೆ ಮತ್ತು ಕಾಮಗಾರಿಗಳ ಪಟ್ಟಿಯನ್ನು ಕೂಡಲೇ ಸಲ್ಲಿಸಿ. ಈ ಬಗ್ಗೆ ಕೇಂದ್ರದ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ, ಈ ಬಗ್ಗೆ ಶೀಘ್ರದಲ್ಲಿ ಮಂಜೂರುಗೊಳಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾಕರಂದ್ಲಾಜೆ ಹೇಳಿದರು.

ಅವರುಇಂದು ವೀಡಿಯೋ ಸಭೆಯ ಮೂಲಕ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾನ್ಸೂನ್ ಹಾನಿಯಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಸಾಗರಮಾಲಾಯೋಜನೆಯಡಿ ಬಾಕಿ ಇರುವ ಕಾಮಗಾರಿಗಳ ಬಗ್ಗೆ ವಿವರವಾದ ಮಾಹಿತಿ ನೀಡಿ.ಉಪ್ಪುಂದದಲ್ಲಿ 130 ಕೋಟಿರೂ.ವೆಚ್ಚದಲ್ಲಿ ಬಂದರು ನಿರ್ಮಾಣ ಕುರಿತಂತೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ. ಕೇಂದ್ರದಲ್ಲಿ ಹೊಸ ಮೀನುಗಾರಿಕಾ ಮಸೂದೆ ಸಿದ್ಧವಾಗುತ್ತಿದ್ದು, ಈ ಬಗ್ಗೆ ಸಲಹೆ ಮತ್ತು ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸಲ್ಲಿಸಿ ಎಂದು ಸಚಿವೆ ಶೋಭಾಕರಂದ್ಲಾಜೆ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ 3 ನೆ ಅಲೆ ಎದುರಿಸುವ ನಿಟ್ಟಿನಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕಅಂತರಪಾಲನೆ ಕುರಿತು ಪರಿಶೀಲಿಸಿ.ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಸಾಮಾಜಿಕಅಂತರ ಪಾಲನೆ ಕುರಿತು, ಕಾರ್ಖಾನೆಗಳಿಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ಕಾಮಗಾರಿಆರಂಭಿಸಲಾಗಿರುವಆಕ್ಸಿಜನ್ ಘಟಕಗಳು ಶೀಘ್ರದಲ್ಲಿ ಕಾರ್ಯನಿರ್ವಹಣೆ ಮಾಡುವಂತೆಕ್ರಮ ಕೈಗೊಳ್ಳಿ.ದುರ್ಬಲ ವರ್ಗದವರಿಗೆಆದ್ಯತೆಯಲ್ಲಿಕೋವಿಡ್ ಲಸಿಕೆ ನೀಡಿ.ಅಪೌಷ್ಠಿಕ ಮಕ್ಕಳನ್ನು ಗುರುತಿಸಿ ಅವರಿಗೆ ಪೌಷ್ಠಿಕ ಆಹಾರ ಸೌಲಭ್ಯಒದಗಿಸುವಂತೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆಎಚ್ಚರವಹಿಸುವಂತೆ ಸೂಚಿಸಿದರು.

ಮಾನ್ಸೂನ್‌ ಅವಧಿಯಲ್ಲಿ ನೆರೆಹಾನಿಗೊಳಗಾಗುವ ಸಂತ್ರಸ್ಥರಿಗೆ ತಕ್ಷಣದಲ್ಲಿ ಪರಿಹಾರ ವಿತರಿಸುವಂತೆ ತಿಳಿಸಿದ ಸಂಸದರು, ಹಾನಿಗೊಳಗಾಗುವ ತಗ್ಗು ಪ್ರದೇಶಗಳನ್ನು ಗುರುತಿಸಿಕೊಂಡು ಆ ಪ್ರದೇಶದಲ್ಲಿಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಯಾವುದೇ ಸಂದರ್ಭದಲ್ಲಿ ನೆರವು ನೀಡಲು ಸಿದ್ಧವಾಗಿರುವಂತೆ ಸೂಚಿಸಿದರು.

ಜಿಲ್ಲಾಧಿಕಾರಿಜಿ.ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷ ಪ್ರಾಕೃತಿಕ ವಿಕೋಪದಿಂದ 110 ಕೋಟಿರೂ.ಮೂಲಸೌಕರ್ಯಕ್ಕೆ ಹಾನಿಯಾಗಿದ್ದು, ಇದರಲ್ಲಿ ಸಮುದ್ರಕೊರೆತದಿಂದ 99 ಕೋಟಿರೂ. ಹಾನಿ ಸಂಭವಿಸಿದೆ. ಈ ಬಗ್ಗೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಕೋವಿಡ್ 3 ನೇ ಅಲೆ ತಡೆಯುವ ನಿಟ್ಟಿನಲ್ಲಿಜಿಲ್ಲೆಯಲ್ಲಿಒಟ್ಟು 50 ಮಕ್ಕಳ ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ.ಜಿಲ್ಲೆಯ 2.40 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯ ನಡೆಯುತ್ತಿದೆ.ಎಂಡೋ ಸಲ್ಫಾನ್ ಪೀಡಿತರಿಗೆ ಹಾಗೂ ಅವರಕುಟುಂಬದವರಿಗೆ ಲಸಿಕೆ ನೀಡಲಾಗುತ್ತಿದೆ.ನೆರೆ ಪರಿಹಾರಕ್ಕಾಗಿ 11 ಕೋಟಿರೂ.ಹಣ ಇದ್ದು,ಅನುದಾನದಕೊರತೆಇಲ್ಲ. ವಿಕೋಪ ನಿರ್ವಹಣೆಗೆಎಲ್ಲಾಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಸಭೆಯಲ್ಲಿಅಪರಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ವಿವಿಧಇಲಾಖೆಯ ಅಧಿಕಾರಿಗಳು ಇದ್ದರು.

See also  ಬೈಕ್ ಗೆ ಲಾರಿ ಡಿಕ್ಕಿ: ಸವಾರ ಮೃತ್ಯು, ಹೆದ್ದಾರಿ ತಡೆದು ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು