News Kannada
Thursday, December 01 2022

ಕರಾವಳಿ

ಸುಲ್ಕೇರಿಯಲ್ಲಿ ಎರಡೂವರೆ ಮಗು ನಾಪತ್ತೆ– ನದಿಯಲ್ಲಿ ಶೋಧ

Photo Credit :

ಮಂಗಳೂರು:  ಬೆಳ್ತಂಗಡಿ ತಾಲ್ಲೂಕಿನ ಸುಲ್ಕೇರಿ ಜಂತಿಗೋಳಿ ಪರಾರಿ ನಿವಾಸಿ ಸಂಜೀವ ಶೆಟ್ಟಿಯವರ ಪುತ್ರಿ ಸುಚಿತ್ರಾ ಮತ್ತು ಸುಭಾಷ್ ದಂಪತಿಯ ಎರಡೂವರೆ ವರ್ಷದ ಹೆಣ್ಣು ಮಂಗಳವಾರ ನಾಪತ್ತೆಯಾಗಿದೆ.

ಸುಚಿತ್ರಾ ಅವರು ಮಗುವನ್ನು ಮನೆಯಲ್ಲೇ ಬಿಟ್ಟು ತಾಯಿಯೊಂದಿಗೆ ಹಸುಗಳಿಗೆ ಹುಲ್ಲು ತರಲೆಂದು ತೋಟಕ್ಕೆ ಹೋಗಿದ್ದ ವೇಳೆ ಮಗು ನಾಪತ್ತೆಯಾಗಿದೆ.

ಮನೆಯವರು ಸೇರಿದಂತೆ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಊರವರು ಮಗುವಿನ ಶೋಧಕಾರ್ಯ ನಡೆಸುತ್ತಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ವೇಣೂರು ಠಾಣಾ ಎಸ್.ಐ ಲೋಲಾಕ್ಷ ಮತ್ತು ಸಿಬ್ಬಂದಿ ವರ್ಗ ಭೇಟಿ ನೀಡಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಮನೆಯಿಂದ 100 ಮೀಟರ್ ದೂರದಲ್ಲಿ ನದಿಯೊಂದು ಹರಿಯುತ್ತಿದ್ದು, ಮಗು ಆ ಕಡೆಗೇನಾದರೂ ಹೋಗಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.  ಈ ನಿಟ್ಟಿನಲ್ಲಿ ಅಗ್ನಿಶಾಮಕ ದಳದವರು ಮತ್ತು ಸ್ಥಳೀಯ ಮುಳುಗು ತಜ್ಞರು ನದಿಯಲ್ಲಿ ಶೋಧ ನಡೆಸುತ್ತಿದ್ದಾರೆ.

See also  ಪ್ರಸಾದ ಸೇವಿಸಿ ಇಬ್ಬರು ಸಾವು, ೧೧ಮಂದಿ ಅಸ್ವಸ್ಥ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು