News Kannada
Friday, December 02 2022

ಮಂಗಳೂರು

ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಮುಂದೂಡಿಕೆ

Photo Credit :

ಮಂಗಳೂರು: ಆಗಸ್ಟ್‌ 14 ಮತ್ತು 28ರಂದು ನಿಗದಿಯಾಗಿದ್ದ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನು ಮಂಗಳೂರು ವಿಶ್ವವಿದ್ಯಾಲಯವು ಮುಂದೂಡಿದೆ.

ವಾರಾಂತ್ಯ ಕರ್ಫ್ಯೂ (ಕೋವಿಡ್) ಹಿನ್ನೆಲೆಯಲ್ಲಿ ಆ. 14 ಮತ್ತು 28ರಂದು ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಆಗಬಹುದು. ಈ ನಿಟ್ಟಿನಲ್ಲಿ ಅಂದಿನ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಆ ದಿನಗಳ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಆ.12ರಂದು ವಿಶ್ವವಿದ್ಯಾಲಯದ ವೆಬ್‌ಸೈಟ್‌ (www.mangaloreuniversity.co.in)ನಲ್ಲಿ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದೂಡಲಾಗಿದ್ದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ಪುನಃ ಆರಂಭಗೊಂಡಿದ್ದು, ಬುಧವಾರ 47,665 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ವಿಶ್ವವಿದ್ಯಾಲಯ ವ್ಯಾಪ್ತಿಯ ವಿವಿಧ ಕಾಲೇಜುಗಳಲ್ಲಿ ಪದವಿಯ 51 ವಿಷಯಗಳಿಗೆ ಪರೀಕ್ಷೆ ನಡೆದಿದ್ದು, ನೋಂದಾಯಿಸಿದ್ದ 43,864 ವಿದ್ಯಾರ್ಥಿಗಳಲ್ಲಿ 41,989 ಮಂದಿ ಪರೀಕ್ಷೆ ಬರೆದಿದ್ದಾರೆ. 1875 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಸ್ನಾತಕೋತ್ತರ ವಿಭಾಗದ 59 ವಿಷಯಗಳಿಗೆ ಪರೀಕ್ಷೆ ನಡೆದಿದ್ದು, 5,732 ವಿದ್ಯಾರ್ಥಿಗಳಲ್ಲಿ 5,676 ಮಂದಿ ಹಾಜರಾಗಿದ್ದು, 56 ಮಂದಿ ಗೈರಾಗಿದ್ದಾರೆ.

See also  ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗೋತ್ಸವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು