News Kannada
Wednesday, October 05 2022

ಗಾಂಧಿನಗರ

‘ಚಿನ್ನದ ಹುಡುಗ’ ನೀರಜ್‌ ಚೋಪ್ರಾ ಕುರಿತು ಸಿನಿಮಾ: ಕರಾವಳಿ ನಿರ್ಮಾಪಕನ ಆಸಕ್ತಿ - 1 min read

Photo Credit :

ಮಂಗಳೂರು: ಟೋಕಿಯೊ– 2020 ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆತದ ಮೂಲಕ ಭಾರತಕ್ಕೆ ಅಥ್ಲೆಟಿಕ್ಸ್‌ ವಿಭಾಗದಲ್ಲಿ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾ ಸಾಧನೆಯ ಕುರಿತು ಸಿನಿಮಾ‌ ಮಾಡಲು ನಿರ್ಮಾಪಕ, ದಕ್ಷಿಣ ಕನ್ನಡ ಜಿಲ್ಲೆಯ ಅರುಣ್‌ ರೈ ತೋಡಾರ್ ಈಗ ಮುಂದಾಗಿದ್ದಾರೆ.‘

ತುಳುನಾಡಿನ ಸಾಂಸ್ಕೃತಿಕ ಕ್ರೀಡೆಯಾದ ಕಂಬಳದ ಬಗ್ಗೆ ಕನ್ನಡದ ಹಿರಿಯ ನಿರ್ದೇಶಕ ಎಸ್‌.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ‘ಬಿರ್ದ್‌ದ ಕಂಬುಲ’ ಸಿನಿಮಾ ನಿರ್ಮಾಣ ಮಾಡುತ್ತಿರುವ ಅರುಣ್ ರೈ ತೋಡಾರ್, ಮತ್ತೊಂದು ಸಾಹಸಕ್ಕೆ ಅಣಿಯಾಗಿದ್ದಾರೆ. ಮಂಗಳೂರು ಎ.ಆರ್. ಪ್ರೊಡಕ್ಸನ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನೀರಜ್ ಚೋಪ್ರಾ ಕುರಿತು ಹಿಂದಿಯಲ್ಲಿ ಸಿನಿಮಾವನ್ನು ನಿರ್ಮಿಸಿ ಕನ್ನಡ, ಮಲಯಾಳಂ, ತೆಲುಗು, ತಮಿಳು ಭಾಷೆಗೆ ಡಬ್ ಮಾಡಲು ಚಿಂತನೆ ನಡೆಸಲಾಗಿದೆ. ಆ ಮೂಲಕ ದೇಶದ ಯುವ ಜನತೆಯಲ್ಲಿ ಕ್ರೀಡಾ ಸ್ಫೂರ್ತಿ ತುಂಬುವುದು ನಮ್ಮ ಉದ್ದೇಶ’ ಎಂದರು.

See also  ಕಾಸರಗೋಡು ನಗರಸಭಾ ಪಾರ್ಕ್ ನ ಮರಗಳಿಗೆ ಕತ್ತರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು