News Kannada
Tuesday, December 06 2022

ಕರಾವಳಿ

ಉಗ್ರರ ವಶದಲ್ಲಿರುವ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಬಂಟ್ವಾಳದ ಧರ್ಮಗುರು

Photo Credit :

ಬಂಟ್ವಾಳ: ತಾಲಿಬಾನ್ ವಶವಾಗಿರುವ ಅಫ್ಘಾನಿಸ್ತಾನದಲ್ಲಿ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಸಮೀಪದ ಕಲ್ಕುರಿ ನಿವಾಸಿ ಧರ್ಮಗುರು ಫಾ.ಜೆರೋಮ್ ಸಿಕ್ವೆರಾ ಅವರು ಅಫ್ಘಾನಿಸ್ಥಾನದ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದಾರೆ.

ಸಧ್ಯ ಅವರು ಮನೆಯವರೊಂದಿಗೆ ಸಂಪರ್ಕದಲ್ಲಿದ್ದು, ಸುರಕ್ಷಿತವಾಗಿದ್ದಾರೆಂದು ಮನೆ ಮಂದಿ ತಿಳಿಸಿದ್ದಾರೆ. ಫಾ.ಜೆರೋಮ್ ಅವರು ಅಫ್ಘಾನಿಸ್ಥಾನದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ೫ ವರ್ಷಗಳ ಹಿಂದೆ ಅಫ್ಘಾನಿಸ್ಥಾನದಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿದ್ದ ಅವರು ಬಳಿಕ ಜೆಮ್ಷೆಡ್‌ಪುರದಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ಡಿಸೆಂಬರ್‌ನಲ್ಲಿ ಮರಳಿ ಅಫ್ಘಾನಿಸ್ಥಾನಕ್ಕೆ ತೆರಳಿದ್ದರು.

ತಾಲಿಬಾನ್ ಉಗ್ರರ ಸಂಘರ್ಷ ಆರಂಭವಾಗುತ್ತಿದ್ದಂತೆ ಊರಿಗೆ ಮರಳಲು ಸಿದ್ಧತೆ ನಡೆಸಿದ್ದ ಫಾದರ್ ಅವರು ಅವರ ಜತೆಗಾರ ಮತ್ತೋರ್ವ ಧರ್ಮಗುರು ಅವರಿಗಾಗಿ ವಿಮಾನ ನಿಲ್ದಾಣದಲ್ಲಿ ಉಳಿದಿದ್ದರು ಎಂದು ಮನೆ ಮಂದಿ ತಿಳಿಸಿದ್ದಾರೆ.

See also  ತಾಲಿಬಾನಿಗಳ ಜೊತೆಗೆ ಸಚಿವ ಜೈಶಂಕರ್‌ ಭೇಟಿ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಸರ್ಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು