News Kannada
Wednesday, December 07 2022

ಕರಾವಳಿ

ಸೆ. 3ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Photo Credit :

  ಕರಾವಳಿ : ಸೆಪ್ಟೆಂಬರ್‌ 3ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಎಲ್ಲ ಭಾಗಗಳಲ್ಲಿ ಸೆಪ್ಟೆಂಬರ್‌ 3ರವರೆಗೆ ವರುಣ ಆರ್ಭಟಿಸುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೋಮವಾರ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಇಂದು (ಆ,31) ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ವೇಳೆ ಯಾದಗಿರಿ, ಕಲಬುರಗಿ, ಹಾಗೂ ಬೀದರ್‌ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಕರ್ನಾಟಕ ಕರಾವಳಿಯಲ್ಲಿ ಗಾಳಿ ಬೀಸುವ ಜೊತೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ.

See also  ಚನ್ನೈನಲ್ಲಿ ಮುಂದಿನ 48 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ..
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು