News Kannada
Saturday, October 01 2022

ಕರಾವಳಿ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯವರೆಗೂ ಮಳೆ : ಹವಾಮಾನ ಇಲಾಖೆ - 1 min read

Photo Credit :

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯವರೆಗೂ(ಮಂಗಳವಾರ) ಮಳೆಯ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ ನವೆಂಬರ್‌ 17ರ ಬಳಿಕ ರಾಜ್ಯದಲ್ಲಿ ಮಳೆ ಕಡಿಮೆ ಆಗುವ ನಿರೀಕ್ಷೆಯಿದೆ.

ವಾಯುಭಾರ ಕುಸಿತದಿಂದ ತಮಿಳುನಾಡಿನ ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಮಳೆ ಆಗಿತ್ತು. ಇದೀಗ ಮಳೆಯೂ ತಗ್ಗುವ ಮುನ್ಸೂಚನೆ ಇದೆ.ಆದರೆ, ಆಂಧ್ರಪ್ರದೇಶ, ಒಡಿಶಾ ಮೂಲಕ ಪಶ್ಚಿಮ ಬಂಗಾಳದ ತನಕ ಹಾದು ಹೋಗಿರುವ ಟ್ರಫ್‌ ಹಾಗೂ ಆಗ್ನೇಯ ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪ್ರಭಾವ ರಾಜ್ಯದ ಮೇಲೂ ನವೆಂಬರ್‌ 16ರವರೆಗೆ ಇರಲಿದೆ ಎಂದು ತಿಳಿಸಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗಾಳಿ, ಸಿಡಿಲು, ಮಿಂಚು ಸಹಿತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ.
ಆದರೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

See also  ಸಿದ್ದಾಪುರ: ಭಾರಿ ಗಾಳಿ ಮಳೆಯಿಂದ ಮನೆ ಮೇಲೆ ಮರ ಬಿದ್ದು ನಾಲ್ವರಿಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು