ಉಡುಪಿ: ಮುಸಲ್ಮಾನ ಅರಸರು ಯಾವುದೇ ಜಾಗವನ್ನು ಕೃಷ್ಣಮಠಕ್ಕಾಗಲಿ, ಅನಂತೇಶ್ವರ ದೇವಳಕ್ಕಾಗಲಿ ನೀಡಿಲ್ಲ ಎಂದು ಶಾಸಕ ಕೆ ರಘುಪತಿ ಭಟ್ ಹೇಳಿದರು. ಮುಸಲ್ಮಾನ ಅರಸರು ಕೃಷ್ಣಮಠಕ್ಕೆ ಜಾಗ ಕೊಟ್ಟರು ಎಂಬ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿಕೆಗೆ ತಿರುಗೇಟು ನೀಡಿದರು.
ಹಾಜಿ ಅಬ್ದುಲ್ಲಾ ಸಾಹೇಬರು ಭಕ್ತರಾಗಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ ಉಲ್ಲೇಖವಿದೆ. ಆದರೆ
ಮಿಥುನ್ ರೈ ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ಗೊತ್ತಿಲ್ಲ . ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದರು. ಮಿಥುನ್ ರೈ ಅಯೋಧ್ಯೆಯ ಪರಿಸ್ಥಿತಿ ಬಗ್ಗೆ ಚಿಂತನೆ ಮಾಡಲಿ ಎಂದು ಕಿಡಿಕಾರಿದರು.
ಅನಂತೇಶ್ವರ ದೇಗುಲಕ್ಕೆ ರಾಮಭೋಜನು ಭೂಮಿ ಕೊಟ್ಟ ಬಗ್ಗೆ ಉಲ್ಲೇಖ ಇದೆ. ಮುಂದೆ ಆ ಭೂಮಿಯೇ ಕೃಷ್ಣ ಮಠಕ್ಕೆ ಬಳಕೆಯಾಗಿದೆ. ಅನಂತೇಶ್ವರ ದೇಗುಲದ ನಂತರ ಕೃಷ್ಣ ಮಠ ನಿರ್ಮಾಣಗೊಂಡಿದೆ. ಸದ್ಯ ಇರುವ ಜಾಮಿಯಾ ಮಸೀದಿ ಕೂಡ ಜಂಗಮರ ಮಠದ ಜಾಗದಲ್ಲಿತ್ತು ಎಂದು ಹೇಳಲಾಗುತ್ತದೆ ಎಂದು ಹೇಳಿದ್ದಾರೆ.
ಉಡುಪಿಯ ಶೋಕಮಾತಾ ಚರ್ಚ್ ಕೃಷ್ಣ ಮಠದವರು ಕೊಟ್ಟ ಲೀಸ್ ಭೂಮಿಯಲ್ಲಿದೆ ಎಂದಿರುವ ಶಾಸಕರು, ಉಡುಪಿ ಸೌಹಾರ್ದತೆಗೆ ಹೆಸರಾದ ಕ್ಷೇತ್ರವಾಗಿದೆ.
ಮುಸಲ್ಮಾನರಿಗೂ ಮಸೀದಿ ಕಟ್ಟಲು ಜಂಗಮರ ಮಠ ಜಾಗ ಕೊಟ್ಟಿದೆ. ಕ್ರಿಶ್ಚಿಯನ್ ಸಮುದಾಯಕ್ಕೆ ಚರ್ಚ್ ಕಟ್ಟಲು ಕೃಷ್ಣಾಪುರ ಮಠ ಭೂಮಿ ಕೊಟ್ಟಿದೆ ಎಂದರು.
ಹಾಜಿ ಅಬ್ದುಲ್ಲಾ ಸಾಹೇಬರು ಭಕ್ತರಾಗಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ ಉಲ್ಲೇಖವಿದೆ. ಆದರೆ
ಮಿಥುನ್ ರೈ ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ಗೊತ್ತಿಲ್ಲ . ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದರು. ಮಿಥುನ್ ರೈ ಅಯೋಧ್ಯೆಯ ಪರಿಸ್ಥಿತಿ ಬಗ್ಗೆ ಚಿಂತನೆ ಮಾಡಲಿ. ಮಥುರಾದಲ್ಲಿ ಕೃಷ್ಣ ಮಂದಿರ, ಕಾಶಿ ಬಗ್ಗೆ ದೇಶದ ಜನತೆಗೆ ಗೊತ್ತಿದೆ. ಈಗ ಒಂದೊಂದೇ ಕ್ಷೇತ್ರಗಳು ಮುಕ್ತವಾಗುತ್ತಿವೆ ಎಂದು ಮಿಥುನ್ ರೈಗೆ ಶಾಸಕರು ತಿರುಗೇಟು ನೀಡಿದ್ದಾರೆ.