News Karnataka Kannada
Saturday, April 20 2024
Cricket
ಕರಾವಳಿ

ಉಡುಪಿ: ಡಾ.ನಿ.ಬೀ.ವಿಜಯ ಬಲ್ಲಾಳರಿಗೆ ಸಂಸ್ಕೃತಿ ಸಾಧಕ ಪ್ರಶಸ್ತಿ ಪ್ರದಾನ

In the city Dr. N. B. Vijaya Ballalar was presented with Culture Sadhaka Award
Photo Credit :

ಉಡುಪಿ: ರಂಗಭೂಮಿ ವತಿಯಿಂದ ದಿ.ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ರಂಗಭೂಮಿ ಆನಂದೋತ್ಸವದ ಕಾರ್ಯಕ್ರಮದಲ್ಲಿ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿಸಿದ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಸಂಸ್ಕೃತಿ ಸಾಧಕ ಪ್ರಶಸ್ತಿ’ಯನ್ನು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ ಅವರಿಗೆ ಪ್ರದಾನ ಮಾಡಲಾಯಿತು.
ಅಧ್ಯಕ್ಷತೆಯನ್ನು ಮಣಿಪಾಲ ಮಾಹೆಯ ಟೆಕ್ನಾಲಜಿ ಆ್ಯಂಡ್ ಸೈನ್ಸ್ ಸಹ ಉಪಕುಲಪತಿ ಡಾ.ನಾರಾಯಣ ಸಭಾಹಿತ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಕೆ.ರಘುಪತಿ ಭಟ್, ಮಣಿಪಾಲ ಕೆಎಂಸಿಯ ಡೀನ್ ಡಾ.ಪದ್ಮ ರಾಜ ಹೆಗ್ಡೆ ಭಾಗವಹಿಸಿದ್ದರು. ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ, ರಂಗ ನಿರ್ದೇಶಕ ಡಾ.ಶ್ರೀಪಾದ ಭಟ್, ಟ್ರಸ್ಟ್‌ನ ಗಿರಿಜಾ ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು.

ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಸ್ವಾಗತಿಸಿದರು. ರಂಗಭೂಮಿ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರದೀಪ್ ಕುತ್ಪಾಡಿ ಸನ್ಮಾನಿತರ ಪರಿಚಯ ಮಾಡಿದರು. ಪೂರ್ಣಿಮಾ ಸುರೇಶ್ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು