News Kannada
Friday, December 09 2022

ಕಾಸರಗೋಡು

ಕುಂಬಳೆಯಲ್ಲಿ ಟ್ರಿಪಲ್ ಲಾಕ್‌ಡೌನ್: ವ್ಯಾಪಾರಿಗಳ ಆಕ್ರೋಶ

Photo Credit :

ಕಾಸರಗೋಡು: ಕೊರೋನಾ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಕುಂಬಳೆಯಲ್ಲಿ ಇಂದಿನಿಂದ ಟ್ರಿಪಲ್ ಲಾಕ್ ಡೌನ್ ಜಾರಿಗೆ ತರಲಾಗಿದ್ದು , ತೆರೆದಿದ್ದ ವ್ಯಾಪಾರ ಮಳಿಗೆಗಳನ್ನು ಪೊಲೀಸರು ಬಲವಂತವಾಗಿ ಮುಚ್ಚಿಸಿದ್ದು ಇದರಿಂದ ಆಕ್ರೋಶಗೊಂಡ ವರ್ತಕರು ಪ್ರತಿಭಟನೆ ನಡೆಸಿದರು . ಕುಂಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟ್ರಿಪಲ್ ಲಾಕ್ ಡೌನ್ ಜಾರಿಗೆ ತಂದಿದ್ದರೂ ಕುಂಬಳೆ ಪೇಟೆಯಲ್ಲಿ ಮಾತ್ರ ವ್ಯಾಪಾರ ಮಳಿಗೆಗಳನ್ನು ಮುಚ್ಚಿಸಿದ್ದು , ಇದು ಆಕ್ರೋಶಕ್ಕೆ ಕಾರಣವಾಗಿದೆ.

ನಾಳೆಯಿಂದ ವ್ಯಾಪಾರ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಬೇಕು ಎಂದು ವರ್ತಕರು ಹೇಳಿದ್ದು , ಇಲ್ಲದಿದ್ದಲ್ಲಿ ಕೋವಿಡ್ ಮಾನದಂಡ ಪಾಲಿಸಿ ಎಲ್ಲಾ ವ್ಯಾಪಾರ ಮಳಿಗೆಗಳನ್ನು ತೆರೆಯಲಾಗುವುದು ಎಂದು ಮುನ್ನೆಚ್ಚರಿಕೆ ನೀಡಿದ್ದಾರೆ .

ಜಿಲ್ಲೆಯ ೧೯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೋಂಕು ಹೆಚ್ಚಳದ ಹಿನ್ನಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೆ ತರಲಾಗಿದ್ದು , ಅಗತ್ಯ ವಸ್ತುಗಳ ಅಂಗಡಿಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ.

ಕುಂಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟ್ರಿಪಲ್ ಲಾಕ್ ಡೌನ್ ಜಾರಿಗೊಳಿಸಿದ್ದು , ಇದರಿಂದ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು , ಕೆಲ ಪ್ರದೇಶಗಳಲ್ಲಿ ಮಾತ್ರ ವ್ಯಾಪಾರ ಮಳಿಗೆಗಳನ್ನು ಮುಚ್ಚಿಸುವ ತೀರ್ಮಾನ ದ ವಿರುದ್ಧ ವರ್ತಕರು ಆಕ್ರೋಶ ಗೊಂಡಿದ್ದಾರೆ.

See also  ಕಾಸರಗೋಡು: ಬುಧವಾರ 6 ಮಂದಿಗೆ ಕೊರೋನಾ ಸೋಂಕು ದೃಢ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು