News Kannada
Wednesday, March 22 2023

ಕಾಸರಗೋಡು

ಮಹಿಳಾ ಮೋರ್ಚಾ ನೇತೃತ್ವದಲ್ಲಿ ಕೇಂದ್ರ ಸರಕಾರದ ಡಿಜಿಟಲ್ ಹೆಲ್ತ್ ಕಾರ್ಡ್ ನೊಂದಾವಣೆ ಶಿಬಿರ

Photo Credit :

ಕಾಸರಗೋಡು : ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಕೇಂದ್ರಸರಕಾರದ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್‌ನ ಆರೋಗ್ಯಕಾರ್ಡ್ ನೊಂದಾವಣೆ ಶಿಬಿರವು ಬದಿಯಡ್ಕ ಗಣೇಶಮಂದಿರದಲ್ಲಿ ಭಾನುವಾರ ಜರಗಿತು.

ಭಾರತೀಯ ಜನತಾ ಪಕ್ಷದ ನೂತನ ಜಿಲ್ಲಾಧ್ಯಕ್ಷ ರವೀಶ ತಂತ್ರಿ, ಕುಂಟಾರು ಆರೋಗ್ಯಕಾರ್ಡ್ ನೀಡಿ ಉದ್ಘಾಟಿಸಿ ಮಾತನಾಡುತ್ತಾ ಕೇಂದ್ರ ಸರಕಾರದ ಹಲವಾರು ಯೋಜನೆಗಳ ಜನರಿಗೆ ತಲುಪಿಸುವಲ್ಲಿ ಮಹಿಳಾ ಮೋರ್ಚಾವು ರಂಗಕ್ಕಿಳಿದಿದೆ. ರಾಜಕೀಯವನ್ನು ಬದಿಗೊತ್ತಿ ಪಕ್ಷಾತೀತವಾಗಿ ಜನರಿಗೆ ನೆರವಾಗುತ್ತಿರುವ ಕಾರ್ಯಕರ್ತರ ಶ್ರಮ ಶ್ಲಾಘನೀಯ ಎಂದರು.

ಬಿಜೆಪಿ ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ವಿನಿ ಮಲ್ಲಡ್ಕ, ಬ್ಲೋಕ್ ಪಂಚಾಯಿತಿ ಸದಸ್ಯೆ ಜಯಂತಿ ಕುಂಟಿಕಾನ ನೇತೃತ್ವವನ್ನು ವಹಿಸಿದ್ದರು. ಪಕ್ಷದ ನೇತಾರರಾದ ಅವಿನಾಶ್ ರೈ, ಬಾಲಕೃಷ್ಣ ಶೆಟ್ಟಿ, ಸೌಮ್ಯಾ ಮಹೇಶ್ ನಿಡುಗಳ, ಮಹೇಶ್ ವಳಕ್ಕುಂಜ, ಶರಣ್ಯ ಬದಿಯಡ್ಕ, ವನಿತಾ, ಬಾಲಸುಬ್ರಹ್ಮಣ್ಯ ಮಲ್ಲಡ್ಕ, ರಾಜೇಶ್ ರೈ, ಶಿವಪ್ರಸಾದ ಬದಿಯಡ್ಕ, ಅನಂತ ಪ್ರಸಾದ್ ಹಾಗೂ ಕಾರ್ಯಕರ್ತರರು ಸಹಕರಿಸಿದರು. 300ಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಅಶ್ವಿನಿ ಮಲ್ಲಡ್ಕ, ಕೇಂದ್ರ ಸರಕಾರದ ಹಲವಾರು ಯೋಜನೆಗಳನ್ನು ಜನರಿಗೆ ತಲುಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂಬುದನ್ನು ಅರಿತು ಈ ಶಿಬಿರವನ್ನು ಆಯೋಜಿಸಲಾಗಿದೆ. ಜಿಲ್ಲೆಯ ವಿವಿಧೆಡೆಗಳಲ್ಲಿ ಮುಂದಿನ ದಿನಗಳಲ್ಲಿ ಇಂತಹ ಶಿಬಿರಗಳನ್ನು ನಡೆಸಲಾಗುವುದು. ಜನತೆಯು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು.

See also  ಯೇಸು ಕ್ರಿಸ್ತರ ಕೊನೆಯ ಭೋಜನದ ದಿನ ಆಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು