ಕಾಸರಗೋಡು: ಬೆಂಗಳೂರಿನಿಂದ ಕಾಸರಗೋಡಿಗೆ ಭಾರೀ ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಆದೂರು ಪೊಲೀಸರು ಬಂಧಿಸಿದ್ದಾರೆ.
ಮುಳಿಯಾರಿನ ನಿಜಾಮುದ್ದೀನ್ (27) ಮತ್ತು ಉದುಮ ಮಾಂಗಾಡ್ ನ ಮುನೀರ್ (28) ಬಂಧಿತರು. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಜೀಪನ್ನು ತಡೆದು ತಪಾಸಣೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದೆ.
ಬೆಂಗಳೂರಿನಿಂದ ಮಾದಕ ವಸ್ತುವನ್ನು ತಂದಿದ್ದಾಗಿ ಬಂಧಿತರು ತಪ್ಪೊಪ್ಪಿಕೊಂಡಿದ್ದಾರೆ.