News Kannada
Sunday, September 25 2022

ಕಾಸರಗೋಡು

ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ ಮೃತದೇಹ ಪತ್ತೆ - 1 min read

Photo Credit : News Kannada

ಕಾಸರಗೋಡು: ಯುವ ದಂಪತಿ ಮನೆಯೊಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪೆರ್ಲ ದಲ್ಲಿ ನಡೆದಿದೆ.

ಸರ್ಪಮಲೆ ಶೆಟ್ಟಿಬೈಲ್ ನ ವಸಂತ (26) ಮತ್ತು ಪತ್ನಿ ಶರಣ್ಯ (22) ಆತ್ಮಹತ್ಯೆ ಮಾಡಿ ಕೊಂಡವರು. ಎರಡು ವರ್ಷಗಳ ಹಿಂದೆ ಇವರ ವಿವಾಹವಾಗಿತ್ತು. ಮನೆಯಲ್ಲಿ ಇವರು ಇಬ್ಬರು ಮಾತ್ರ ವಾಸವಾಗಿದ್ದರು. ಶುಕ್ರವಾರ ಇವರ ಮನೆಯ ಬಾಗಿಲು ತೆರೆದಿರಲಿಲ್ಲ. ಸಂಜೆ ತನಕ ಇಬ್ಬರೂ ಕಾಣದಿರುವುದರಿಂದ ಸಂಶಯಗೊಂಡು ಪರಿಸರ ವಾಸಿಗಳು ಗಮನಿಸಿದಾಗ ಇಬ್ಬರು ನೇಣು ಬಿಗಿದಿರುವುದು ಕಂಡು ಬಂದಿದೆ.

ಶರಣ್ಯ ಕಜಂಪಾಡಿ ನಿವಾಸಿ ಎಂದು ತಿಳಿದುಬಂದಿದೆ. ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ . ಪೊಲೀಸರು ಈ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಬದಿಯಡ್ಕ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳ ಮಹಜರು ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

See also  ಜೀವನದಲ್ಲಿ ಜಿಗುಪ್ಸೆಗೊಂಡು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಮಾಜಿ ಮಿಸ್ ಅಮೆರಿಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು