ಕಾಸರಗೋಡು : ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ 20, 375 ನಿಷೇಧಿತ ಪಾನ್ ಮಸಾಲ ಸಹಿತ ಓರ್ವ ನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಆಲಂಪಾಡಿ ಯ ಗಫೂರ್ (38) ಬಂಧಿತ. ಕುಂದಾಪುರ ದಿಂದ ಎರ್ನಾಕುಲಂ ಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪಾನ್ ಮಸಾಲ ಸಾಗಾಟ ಮಾಡಲಾಗುತ್ತಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವೈಭವ್ ಸಕ್ಸೇನಾ ರಿ ಗೆ ಲಭಿಸಿದ ಖಚಿತ ಮಾಹಿತಿಯಂತೆ ನಗರದ ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ ಪತ್ತೆಯಾಗಿದೆ.
ಬಸ್ಸಿನ ಲಗೇಜ್ ಬಾಕ್ಸ್ ನಲ್ಲಿ ಗೋಣಿ ಚೀಲದಲ್ಲಿ ತುಂಬಿಸಿ ಸಾಗಾಟ ಮಾಡಲಾಗುತ್ತಿತ್ತು.