ಕಾಸರಗೋಡು: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 15.5 ಕಿಲೋ ಗಾಂಜಾವನ್ನು ವಶಪಡಿಸಿಕೊಂಡಿರುವ ಕಾಸರಗೋಡು ನಗರ ಠಾಣಾ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಕಾಞ೦ಗಾಡ್ ನ ಡಿ.ಗಫೂರ್ ( 40) ಬಂಧಿತ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ನಗರ ಹೊರವಲಯದ ಮೀಪುಗುರಿಯಿಂದ ಕಾರನ್ನು ವಶಪಡಿಸಿ ತಪಾಸಣೆ ನಡೆಸಿದಾಗ ಗಾಂಜಾ ಸಾಗಾಟ ಪತ್ತೆಯಾಗಿದೆ.
ಗೋಣಿ ಚೀಲವೊಂದರಲ್ಲಿ ಬಚ್ಚಿಟ್ಟು ಗಾಂಜಾವನ್ನು ಸಾಗಾಟ ಮಾಡಲಾಗುತ್ತಿತ್ತು.