ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕುಟುಂಬ ಕಾರ್ಯಕ್ರಮ ಶನಿವಾರ ನೀಲೇಶ್ವರದ ಕ್ರೂಯಿಸ್ ಹೌಸ್ ಬೋಟ್ ನಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು.
ಈ ಸಂದರ್ಭದಲ್ಲಿ ಮಾಧ್ಯಮ ಕೈಪಿಡಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಘದ ರಾಜ್ಯಅಧ್ಯಕ್ಷ ಶಿವಾನಂದ ತಗಡೂರು ಬಿಡುಗಡೆಗೊಳಿಸಿದರು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎ. ಆರ್ ಸುಬ್ಬಯ್ಯಕಟ್ಟೆ ಅಧ್ಯಕ್ಷತೆ ವಹಿಸಿದ್ದರು.
ಪಳ್ಳಿಕೆರೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್, ಏಷ್ಯಾ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಕಾರ್ಯದರ್ಶಿ ಹೆಚ್. ಬಿ ಮದನ ಗೌಡ, ದ.ಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಘದ ರಾಜ್ಯ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪಮ್ಮಿ ಕೊಡಿಯಾಲ್ ಬೈಲ್, ಅಖಿಲೇಶ್ ನಗುಮುಗಂ, ಜಿಲ್ಲಾ ಕಾಯದರ್ಶಿ ಗಂಗಾಧರ ತೆಕ್ಕೆಮೂಲೆ, ಕೋಶಾಧಿಕಾರಿ ಪುರುಷೋತ್ತಮ ಪೆರ್ಲ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳು, ಓಣಂ ಔತಣ ಕೂಟ ನಡೆಯಿತು.