ಕಾಸರಗೋಡು: ಬೈಕ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಆದೂರು ಸಮೀಪ ನಡೆದಿದೆ ನಡೆದಿದೆ.
ಆದೂರು ಕೈತೋಡಿನ ಅಶೋಕ್ ರವರ ಪುತ್ರ ನಿತೀಶ್ ( ೧೭) ಮೃತಪಟ್ಟವರು. ಅತ್ತನಾಡಿ – ಪಾಂಡಿ ರಸ್ತೆಯಲ್ಲಿ ಅಪಘಾತ ನಡೆದಿದೆ. ಸ್ನೇಹಿತ ಸುಜಿತ್ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಮಗುಚಿ ಬಿದ್ದಿದ್ದು, ಹಿಂಬದಿಯಲ್ಲಿ ಕುಳಿತ್ತಿದ್ದ ನಿತೀಶ್ ರಸ್ತೆಗೆಸೆಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಕಾಸರಗೋಡು ಖಾಸಗಿ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರ ದಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟುಕೊಡಲಿದೆ.