News Kannada
Friday, December 02 2022

ಕಾಸರಗೋಡು

ಕಾಸರಗೋಡು: 9ರ ಹರೆಯದ ಬಾಲಕಿಯನ್ನು ಮೇಲಕ್ಕೆತ್ತಿ ನೆಲಕ್ಕೆ ಎಸೆದ ವ್ಯಕ್ತಿಯ ಬಂಧನ

A man lifted a student who was on her way to a madrassa and threw her on the ground.
Photo Credit : By Author

ಕಾಸರಗೋಡು: ಮದ್ರಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ವ್ಯಕ್ತಿಯೋರ್ವ ಮದ್ರಸ ಆವರಣದಲ್ಲೇ ಮೇಲಕ್ಕೆತ್ತಿ ನೆಲಕ್ಕೆ ಎಸೆದ ಅಮಾನವೀಯ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಉದ್ಯಾವರ ಸಮೀಪ ಈ ಘಟನೆ ನಡೆದಿದೆ.

ಆರೋಪಿ ಮಂಜೇಶ್ವರ ಕುಂಜತ್ತೂರಿನ ಅಬೂಬಕ್ಕರ್ ಸಿದ್ದಿಕ್ (30)ನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಗುರುವಾರ ಬೆಳಿಗ್ಗೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದೆ.ಗಂಭೀರ ಗಾಯಗೊಂಡಿರುವ 9ರ ಹರೆಯದ ಬಾಲಕಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯ ಹತ್ತಿರ ಬಂದ ಈತ ಬಾಲಕಿಯನ್ನು ಮೇಲಕ್ಕೆತ್ತಿ ಎಸೆದಿದ್ದು, ಬಾಲಕಿ ನೆಲದಿಂದ ಎದ್ದೇಳಲು ಯತ್ನಿಸಿದರೂ ಪ್ರಜ್ಞೆ ತಪ್ಪಿ ಬಿದ್ದಿದ್ದು, ಕೃತ್ಯದ ಬಳಿಕ ಆರೋಪಿ ಅಲ್ಲಿಂದ ತೆರಳಿದ್ದನು. ಬಾಲಕಿಯ ಸಹಪಾಠಿಗಳ ಕಣ್ಮುಂದೆಯೇ ಈ ಘಟನೆ ನಡೆದಿದೆ.

ಬಾಲಕಿಯ ಪೋಷಕರು ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರುಆರೋಪಿಯನ್ನು ಬಂಧಿಸಿದ್ದಾರೆ. ಸಿಸಿಟಿವಿ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ.

ಘಟನೆಯನ್ನು ರಾಜ್ಯ ಸರಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ತಿಳಿಸಿದ್ದಾರೆ.

See also  ಬೆಳ್ತಂಗಡಿ: ಧರ್ಮಸ್ಥಳಕ್ಕೆ ಭೇಟಿ ನೀಡಿದ ಖ್ಯಾತ ತಮಿಳು ಚಲನಚಿತ್ರ ನಟ ವಿಶಾಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು