ಕಾಸರಗೋಡು: ನಿಷೇಧಿತ ತಂಬಾಕು ಉತ್ಪನ್ನಗಳ ವಿರುದ್ಧ ಅಭಿಯಾನದ ಅಂಗವಾಗಿ 31,800 ಕ್ಕೂ ಹೆಚ್ಚು ನಿಷೇಧಿತ ತಂಬಾಕು ಉತ್ಪನ್ನಗಳನ್ನು ಪತ್ತೆ ಹಚ್ಚಿದ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ವಿಜಯಪುರ ಗಾಂಧಿ ಚೌಕದ ಸಿದ್ಧಲಿಂಗಪ್ಪ (39) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಮಂಗಳೂರಿನಿಂದ ಕೊಚ್ಚಿಗೆ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ತಡೆದಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.