ಕಾಸರಗೋಡು: ಸಂವಿಧಾನ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ನಾಗರಿಕರ ಹಕ್ಕು ಗಳು ಹಾಗೂ ಸಾರ್ವಭೌಮತೆ ಖಾತರಿ ಪಡಿಸಬೇಕಾದ ಅನಿವಾರ್ಯತೆ ಆಡಳಿತ ವ್ಯವಸ್ಥೆಯದ್ದಾಗಿದೆ ಎಂದು ರಾಜ್ಯ ಬಂದರು ಸಚಿವ ಅಹಮ್ಮದ್ ದೇವರ್ ಕೋವಿಲ್ ಹೇಳಿದರು.
ಗಣರಾಜ್ಯೋತ್ಸವದಂಗವಾಗಿ ಕಾಸರಗೋಡು ನಗರಸಭಾ ಸ್ಟೇಡಿಯಂ ನಲ್ಲಿ ಧ್ವಜಾ ರೋಹಣ ನೆರವೇರಿಸಿದ ಬಳಿಕ ಗೌರವ ವಂದನೆ ಸ್ವೀಕರಿಸಿ ಮಾತನಾಡುತ್ತಿದ್ದರು.
ಸಂಸದ ರಾಜಮೋಹನ್ ಉಣ್ಣಿತ್ತಾನ್, ಶಾಸಕರಾದ ಎ.ಕೆ.ಎಂ.ಅಶ್ರಫ್, ಎನ್.ಎ.ನೆಲ್ಲಿಕುನ್ನು, ಸಿ.ಎಚ್.ಕುಂಞಂಬು, ಇ.ಚಂದ್ರಶೇಖರನ್, ಎಂ.ರಾಜಗೋಪಾಲನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶಾನವಾಸ್ ಪಾದೂರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠ ಡಾ.ವೈಭವ್ ಸಕ್ಸೇನಾ ಗೌರವ ವಂದನೆ ಸ್ವೀಕರಿಸಿದರು. ಸ್ವಾತಂತ್ರ್ಯ ಹೋರಾಟಗಾರರಾದ ಕೆ.ಕುಂಞಕಣ್ಣನ್ ನಂಬಿಯಾರ್ ಮತ್ತು ಗೋಪಾಲನ್ ನಾಯರ್ ಮುಖ್ಯ ಅತಿಥಿಗಳಾಗಿದ್ದರು.
ಚೆಂಗಳ ಗ್ರಾಮ ಪಂಚಾಯತ್ ಅಧ್ಯಕ್ಷ ಖಾದರ್ ಬದರಿಯಾ, ಕಾಸರಗೋಡು ಬ್ಲಾಕ್ ಪಂಚಾಯತ್ ಅಧ್ಯಕ್ಷೆ ಸಿ.ಎ.ಸೈಮಾ, ಎ.ಎಸ್.ಪಿ. ಪಿ.ಕೆ.ರಾಜು, ಎಎಸ್ಪಿ ಮುಹಮ್ಮದ್ ನದಿಮುದ್ದೀನ್, ಆರ್ ಡಿ ಒ ಅತುಲ್ ಸ್ವಾಮಿನಾಥ್, ಅಪರ ಜಿಲ್ಲಾಧಿಕಾರಿ ಎಸ್.ಶಶಿಧರನ್ ಪಿಳ್ಳೈ, ಕೆ.ಅಜೇಶ್ ತಹಸೀಲ್ದಾರ್, ಡಿವೈಎಸ್ಪಿಗಳು, ಜಿಲ್ಲೆಯ ಇತರ ಬ್ಲಾಕ್ ಗ್ರಾಮ ಪಂಚಾಯತ್ ಪ್ರತಿನಿಧಿಗಳು, ಕಂದಾಯ, ಪೊಲೀಸ್ ಅಧಿಕಾರಿಗಳು, ಸರಕಾರಿ ಸಾರ್ವಜನಿಕ ವಲಯದ ನೌಕರರು ಹಾಗೂ ಸಾರ್ವಜನಿಕರು ಗಣರಾಜ್ಯೋತ್ಸವದಲ್ಲಿ ಉಪಸ್ಥಿತರಿದ್ದರು.