ಕಾಸರಗೋಡು: ರೈಲು ಡಿಕ್ಕಿ ಹೊಡೆದು ಮಂಜೇಶ್ವರ ತಾಲೂಕು ಆಸ್ಪತ್ರೆಯ ಸಿಬಂದಿಯೋರ್ವಳು ಮೃತಪಟ್ಟ ಘಟನೆ ಬುಧವಾರ ಸಂಜೆ ಉಪ್ಪಳ ರೈಲ್ವೆ ನಿಲ್ದಾಣ ಪರಿಸರದಲ್ಲಿ ನಡೆದಿದೆ.
ಮಂಗಲ್ಪಾಡಿ ಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27) ಮೃತ ಪಟ್ಟವರು. ಬುಧವಾರ ಸಂಜೆ ಕೆಲಸ ಮುಗಿಸಿ ನೀಲೇಶ್ವರ ದಲ್ಲಿರುವ ಮನೆಗೆ ತೆರಳಲು ಉಪ್ಪಳ ರೈಲು ನಿಲ್ದಾಣ ಸಮೀಪ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ.
ಮಂಜೇಶ್ವರ ಠಾಣಾ ಪೊಲೀಸರು ಮಹಜರು ನಡೆಸಿದರು.