News Karnataka Kannada
Saturday, April 20 2024
Cricket
ಕಾಸರಗೋಡು

ಕಾಸರಗೋಡು: ನೇಣು ಬಿಗಿದು ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ

Kasargod: Girl's body found hanging
Photo Credit : By Author

ಕಾಸರಗೋಡು: ಯುವತಿ ಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಡೂರಿನಲ್ಲಿ ನಡೆದಿದೆ. ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26) ಮೃತಪಟ್ಟವರು.

ಬುಧವಾರದಂದು ಮನೆಯ ಕೋಣೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಂದಡ್ಕದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ದಿವ್ಯಾ ಮಂಗಳವಾರ ರಾತ್ರಿ ಕೆಲಸ ಮುಗಿಸಿ ಬುಧವಾರ ಬೆಳಿಗ್ಗೆ ಮನೆಗೆ ಬಂದಿದ್ದರು.  ತಾಯಿ ಹಾಗೂ ಮನೆ ಮಂದಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಕೃತ್ಯ ನಡೆದಿದೆ. ಸಂಜೆ ಪರಿಸರ ವಾಸಿಗಳು ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಈ ನಡುವೆ ಕೋಣೆಯಿಂದ ದಿವ್ಯಾಳ ಆತ್ಮಹತ್ಯೆ ಪತ್ರ ಲಭಿಸಿದೆ. ಪೊಲೀಸರಿಗೆ ಲಭಿಸಿದ ಮಾಹಿತಿಯಂತೆ ಯುವಕ ನೋರ್ವನ ಕೇಂದ್ರೀಕರಿಸಿ ಆದೂರು ಪೊಲೀಸರು ತನಿಖೆ ಆರಂಭಿಸದ್ದಾರೆ. ಯುವಕ ನಿರಂತರ ವಾಗಿ ಮೊಬೈಲ್ ನಲ್ಲಿ ಕಿರುಕುಳ ನೀಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು