News Karnataka Kannada
Saturday, April 20 2024
Cricket
ಕಾಸರಗೋಡು

ಆರ್ದ್ರಮ್ ಮಿಷನ್ ಮೂಲಕ ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲಾಗಿದೆ- ಪಿಣರಾಯಿ ವಿಜಯನ್

State's health sector has been strengthened through Ardram Mission: Pinarayi Vijayan
Photo Credit : By Author

ಕಾಸರಗೋಡು: ಆರ್ದ್ರಮ್ ಮಿಷನ್ ಮೂಲಕ ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲಾಗಿದೆ ಮತ್ತು ಸಾರ್ವಜನಿಕ ಆರೋಗ್ಯ ಕೇಂದ್ರಗಳ ರಚನೆಯು ಕೇರಳದ ಸಾರ್ವಜನಿಕ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಉತ್ತೇಜನವನ್ನು ನೀಡುತ್ತದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.

ಅವರು ಜಿಲ್ಲೆಯಲ್ಲಿ 25 ಸಾರ್ವಜನಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ 5, 409 ಸಾರ್ವಜನಿಕ ಆರೋಗ್ಯ ಕೇಂದ್ರಗಳನ್ನು ಆನ್ ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದರು. ಎಲ್ಲಾ ತಾಲೂಕು ಜಿಲ್ಲಾ ಆಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆ ನೀಡಲಾಗುತ್ತಿದೆ. ವೈದ್ಯಕೀಯ ಕಾಲೇಜುಗಳಿಗೆ ವಿಶೇಷ ಅಭಿವೃದ್ಧಿ ಪ್ಯಾಕೇಜ್ ಜಾರಿಗೊಳಿಸಲಾಗುತ್ತಿದೆ. ಕೇರಳದಲ್ಲಿ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವುದು ಯಾವುದೇ ರೀತಿಯಲ್ಲಿ ಸ್ವೀಕಾರಾರ್ಹವಲ್ಲ ಮತ್ತು ಯಾವುದೇ ರೀತಿಯಲ್ಲಿ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಭಾಗವಾಗಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.

ಆರೋಗ್ಯ ಸಚಿವೆ ವೀಣಾ ಜಾರ್ಜ್ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಧರ್ಮತ್ತಡ್ಕ , ಎರಿಯಾಲ್, ನೆಟ್ಟಣಿಗೆ, ಏತಡ್ಕ, ಕಾಸರಗೋಡು ಕ್ಷೇತ್ರದ ಕರ್ಮಂತೋಡಿ, ಕೊಳವಯಲ್, ಮಾವುಂಗಾ ಲ್, ಮಡಿಕೈ, ಚಾಮುಂಡಿಕುನ್ನು ಅರೋಗ್ಯ ಕೇಂದ್ರಗಳನ್ನು ಉದ್ಘಾಟಿಸಲಾಯಿತು .

ಮೊಗ್ರಾಲ್‌ಪೂತ್ತೂರು ಪಂಚಾಯತ್ ನ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಎನ್‌ಎ ನೆಲ್ಲಿಕುನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮೊಗ್ರಾಲ್ ಪುತ್ತೂರು ಪಂಚಾಯತ್ ಅಧ್ಯಕ್ಷೆ ಶಮೀರಾ ಫೈಸಲ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕ್ಷಯರೋಗ ಅಧಿಕಾರಿ ಡಾ. ಮುರಳೀಧರ ನಲ್ಲೂರಾಯ ಮುಖ್ಯ ಭಾಷಣ ಮಾಡಿದರು. ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಮುಜೀಬ್ ಕಂಬಾ೫ರ್ , ಮೊಗ್ರಾಲ್ ಪುತ್ತೂರು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ನಿಸಾರ್ ಕುಳಂಗರ, ಮೊಗ್ರಾಲ್ ಪುತ್ತೂರು ಪಂಚಾಯತ್ ಕಾರ್ಯದರ್ಶಿ ಶಿಜಿ, ಮೊಗ್ರಾಲ್ ಪುತ್ತೂರು ಪಂಚಾಯತ್ ಸದಸ್ಯರಾದ ಸುಲೋಚನಾ, ಸಂಪತ್ ಕುಮಾರ್, ಸಿಹೆಚ್ ಸಿ ಪಿಆರ್ ಒ ಮುಳಿಯಾರ್ ಜಿ.ರಂಜಿತ್ ಮೊದಲಾದವರು ಮಾತನಾಡಿದರು. ಮೊಗ್ರಾಲ್ ಪುತ್ತೂರು ಪಂಚಾಯತ್ ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರಮೀಳಾ ಮಜಲ್ ಸ್ವಾಗತಿಸಿ, ಮೊಗ್ರಾಲ್ ಪುತ್ತೂರು ಕುಟುಂಬ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಜ್ಮಿನ್ ಜೆ ನಝೀರ್ ವಂದಿಸಿದರು.

ಪುತ್ತಿಗೆ ಪಂಚಾಯತ್‌ನಲ್ಲಿ ನ ಧರ್ಮತ್ತಡ್ಕದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಎ.ಕೆ.ಎಂ.ಅಶ್ರಫ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಟಿ.ಪಿ.ಅಮೀನಾ ಮುಖ್ಯ ಭಾಷಣ ಮಾಡಿದರು. ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್, ಪುತ್ತಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಂತಿ, ಪುತ್ತಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಪಾಲಾಕ್ಷ ರೈ, ಪುತ್ತಿಗೆ ಗ್ರಾಮ ಪಂಚಾಯತ್ ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷೆ ಎಂ.ಅನಿತಾ, ಪುತ್ತಿಗೆ ಗ್ರಾಮ ಪಂಚಾಯತ್ ಸದಸ್ಯ ಗಂಗಾಧರ, ಪುತ್ತಿಗೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ರಾಜೇಶ್ವರಿ, ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳಾದ ಸಿ.ಕೆ. .ಅಬ್ದುಲ್ ರಹಮಾನ್, ರವಿ ಧರ್ಮತ್ತಡ್ಕ , ಎಸ್.ಎ.ಅಬ್ದುಲ್ಲಾ, ಅಬ್ದುಲ್ ಖಾದರ್, ಶಂಕರ್ ರಾವ್, ಶಂಕರನಾರಾಯಣ ಭಟ್, ಮಹಾಲಿಂಗ ಭಟ್ ಮೊದಲಾದವರು ಮಾತನಾಡಿದರು. ಪುತ್ತಿಗೆ ಗ್ರಾಮ ಪಂಚಾಯತ್ ಸದಸ್ಯೆ ಶಾಂತಿ ಸ್ವಾಗ ತಿಸಿ ಮತ್ತು ಪಿಎಚ್‌ಸಿ ಪುತ್ತಿಗೆ ವೈದ್ಯಾಧಿಕಾರಿ ಡಾ. ಸಿ.ಎಚ್.ಗೋಪಾಲಕೃಷ್ಣ ವಂದಿಸಿದರು. ಕರ್ಮತ್ತೋಡಿಯಲ್ಲಿ ಕುಟುಂಬ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಬ್ಲಾಕ್ ಪಂಚಾಯತ್ ಅಧ್ಯಕ್ಷ

ಸಿ.ಜಿ.ಮ್ಯಾಥ್ಯೂ ಫಲಕ ಅನಾವರಣಗೊಳಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ನ್ಯಾಯವಾದಿ ಗೋಪಾಲಕೃಷ್ಣ ಭಟ್, ಉಪಾಧ್ಯಕ್ಷೆ ಎಂ.ಜನನಿ, ಅಭಿವೃದ್ಧಿ ಕಾರ್ಯಗಳ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಮುಹಮ್ಮದ್ ನಾಸರ್, ವಾರ್ಡ್ ಸದಸ್ಯೆ ಎ.ಪ್ರಸೀಜಾ ಮತ್ತಿತರರು ಭಾಗವಹಿಸಿದ್ದರು. ಮುಳ್ಳೇರಿಯಾ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಾಬಿ ನಾರಾಯಣ ನಂದನ್ ಸ್ವಾಗತಿಸಿ, ಜೆಎಚ್ ಐ ಸಜಿತ್ ಕುಮಾರ್ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು