News Kannada
Friday, March 01 2024
ಮಂಗಳೂರು

ಮಂಗಳೂರು: ಹೃದಯಾಘಾತದಿಂದ ಪೊಲೀಸ್ ಹೆಡ್ ಕಾನ್ಸ್​​ಟೇಬಲ್‌ ನಿಧನ

Photo Credit :

ಮಂಗಳೂರು : ಹೃದಯಾಘಾತದಿಂದ ಪೊಲೀಸ್ ಹೆಡ್ ಕಾನ್ಸ್​​ಟೇಬಲ್‌ವೊಬ್ಬರು‌ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಮೂಡಬಿದ್ರೆ ಪೊಲೀಸ್ ಠಾಣೆಯ ಹೆಡ್​​​ ಕಾನ್ಸ್​​​ಟೇಬಲ್ ಸಂತೋಷ್ ಮೃತರು.

ಕಿರಿವಯಸ್ಸಿನ ಪೊಲೀಸ್ ಸಿಬ್ಬಂದಿಯಾಗಿದ್ದ ಸಂತೋಷ್ ಪ್ರಕರಣವೊಂದರ ಸಂಬಂಧ ಕಾರ್ಯಾಚರಣೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಹೋಗಿದ್ದರು. ಈ ವೇಳೆ ಅವರಿಗೆ ಹೃದಯಘಾತವಾಗಿದೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಸಂತೋಷ್ ಕಳೆದ 12 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ‌ನಿರ್ವಹಿಸುತ್ತಿದ್ದರು. ಯುವ ಪೊಲೀಸ್ ಸಿಬ್ಬಂದಿಯ ನಿಧನಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು