News Kannada
Monday, February 26 2024
ಮಂಗಳೂರು

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಮುಖಂಡರು ರಾಜಕಾರಣ ಮಾಡುತ್ತಿದ್ದಾರೆ: ನಳಿನ್ ಕುಮಾರ್

Photo Credit :

ಮಂಗಳೂರು : ಮೇಕೆದಾಟು ಕುರಿತು ಪಾದಯಾತ್ರೆ ಕಾಂಗ್ರೆಸ್ ನ ಅತ್ಯಂತ ಹೀನಾ ರಾಜಕಾರಣ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮೊದಲ ಅಲೆ, ಎರಡನೇ ಅಲೆ ಬಂದಾಗಲೂ ಕಾಂಗ್ರೆಸ್ ನವರು ಏನನ್ನೂ ಮಾಡಿಲ್ಲ, ಟೀಕೆಯಷ್ಟೇ ಮಾಡಿದ್ದು, ಜನರನ್ನು ದಾರಿ ತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ.

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಮುಖಂಡರು ರಾಜಕಾರಣ ಮಾಡುತ್ತಿದ್ದಾರೆ. ನಿಮ್ಮದೇ ಸರ್ಕಾರ ಮತ್ತು ನಿಮ್ಮದೇ ಮುಖ್ಯಮಂತ್ರಿ ಇದ್ದಾಗ ನೀವು ಮೇಕೆದಾಟು ಬಗ್ಗೆ ಚರ್ಚೆ ಮಾಡಲಿಲ್ಲ, ತಯಾರಿ ಮಾಡಲಿಲ್ಲವೇ? ಇವತ್ತು ನಮ್ಮ ಸರ್ಕಾರ ಸಂಪೂರ್ಣ ಬದ್ದತೆ ಹೊಂದಿದೆ. ನಾವು ಮೇಕೆದಾಟು ಯೋಜನರ ಮಾಡಿಯೇ ಸಿದ್ದ ಎಂದರು.

ಪಾದಯಾತ್ರೆ ಮೂಲಕ ಕಾಂಗ್ರೆಸ್ ಕೊರೊನಾವನ್ನು ವಿಸ್ತಾರ ಮಾಡಲು ನೋಡ್ತಿದಾರೆ. ಕೊರೋನಾ ಹೆಚ್ಚಳವಾದರೆ ಕಾಂಗ್ರೆಸ್ ಹೊಣೆಯಾಗುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು