ಮಂಗಳೂರು: ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.
ಆರೋಪಿಯು ಸ್ಪೈಸ್ ಜೆಟ್ ವಿಮಾನದಲ್ಲಿ ದುಬಾಯಿಗೆ ಪ್ರಯಾಣ ಬೆಳೆಸಲು ಸಿದ್ಧತೆ ನಡೆಸುತ್ತಿದ್ದ ವೇಳೆ 25000 ಅಮೆರಿಕನ್ ಡಾಲರ್ ಹಣವನ್ನು ಅಕ್ರಮವಾಗಿ ಸಾಗಿಸಬೇಕು ಸುತ್ತಿರುವುದು ಬೆಳಕಿಗೆ ಬಂದಿದೆ ಇದರ ಭಾರತೀಯ ಮೌಲ್ಯವು ಸುಮಾರು 18,80,000 ರೂ ಆಗಿದೆ.
ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ