News Kannada
Monday, December 05 2022

ಮಂಗಳೂರು

ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನೆ

Photo Credit :

ಮಂಗಳೂರು : ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ,ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಆಗಸ್ಟ್ 9 ರಂದು ದೇಶವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಸಿಐಟಿಯುನ ದಕ್ಷಿಣ ಕನ್ನಡ ಪ್ರಧಾನ ಕಾರ್ಯದರ್ಶಿ ಇಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ಜರುಗಲಿದೆ ಎಂದು ರೈತ ಕಾರ್ಮಿಕ ಸಂಘಟನೆಗಳಾದ CITU – AITS ಜಂಟಿ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಕೃಷಿ ರಂಗದ ಸುಧಾರಣೆಗಳ ಹೆಸರಿನಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ಹೊಸ ಕೃಷಿ ಕಾನೂನುಗಳು ಸಂಪೂರ್ಣವಾಗಿ ರೈತ ವಿರೋಧಿಯಾಗಿದೆ ಮಾತ್ರವಲ್ಲದೆ ಕಾರ್ಪೋರೇಟ್ ಕಂಪೆನಿಗಳ ಪರವಾಗಿದೆ.ಇಂತಹ ದೇಶವಿರೋಧಿ ಕೃಷಿ ನೀತಿಗಳ ವಿರುದ್ಧ ರೈತರು ಕಳೆದ 7 ತಿಂಗಳಿನಿAದ ಹೋರಾಟದ ಪಥದಲ್ಲಿದ್ದರೂ,ಸರಕಾರವು ಮಾತ್ರ ದಿವ್ಯ ಮೌನ ವಹಿಸಿದೆ. ಮತ್ತೊಂದು ಕಡೆ ಕಾರ್ಮಿಕ ವರ್ಗದ ಎಲ್ಲಾ ಪ್ರಮುಖ ಕಾನೂನುಗಳನ್ನು ಸಂಹಿತೆಗಳನ್ನಾಗಿ ಮಾರ್ಪಡಿಸಿ ಕಾರ್ಮಿಕರ ಹಕ್ಕು ಭಾದ್ಯತೆಗಳನ್ನು ಕಸಿಯಲು ಹೊರಟಿದೆ.ಇಂತಹ ಫ್ಯಾಸಿಸ್ಟ್ ಸರಕಾರದ ವಿರುದ್ಧ ರೈತ ಕಾರ್ಮಿಕರು ಜನಸಾಮಾನ್ಯರು ಸಂಘಟಿತ ಹೋರಾಟ ನಡೆಸಬೇಕಾಗಿದೆ.ಅಂದು ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎಂಬ ಘೋಷ ವಾಕ್ಯದೊಂದಿಗೆ ಕ್ವಿಟ್ ಇಂಡಿಯಾ ಚಳುವಳಿಯು ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಮಹತ್ವದ ಮೈಲುಗಲ್ಲಾಗಿದ್ದು, ಇಂದು ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯುವ ಕಾರ್ಪೋರೇಟ್ ಕಂಪೆನಿಗಳ ವಿರುದ್ದ ಎರಡನೆಯ ಸ್ವಾತಂತ್ರ‍್ಯ ಸಂಗ್ರಾಮಕ್ಕೆ ರೈತ ಕಾರ್ಮಿಕರು ಅಣಿಯಾಗುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಆಗಸ್ಟ್ 9ರಂದು ಜರುಗಲಿರುವ ಪ್ರತಿಭಟನೆ ಯಲ್ಲಿ ರೈತ ಕಾರ್ಮಿಕರು, ಸಾರ್ವಜನಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು AITS ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಹಾಗೂ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ರವರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

See also  ಪುನೀತ ನಮನ - ನೆನಪಿನ ದೋಣಿಯಲ್ಲಿ ರಾಜಕುಮಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು