NewsKarnataka
Friday, November 26 2021

ಮಂಗಳೂರು

ಪ್ರಧಾನಿ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ

ಮಂಗಳೂರು : ಭಾರತೀಯ ಜನತಾ ಪಾರ್ಟಿ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್, ಮಂಗಳೂರು ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ಹಾಗೂ ಉಚಿತ ಕೋವಿಡ್ ಲಸಿಕಾ ಶಿಬಿರ ಜರುಗಿತು.

ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಬಿರವನ್ನು ಭಾಜಪಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಉದ್ಘಾಟಿಸಿದರು.

ನೂರಕ್ಕಿಂತಲೂ ಹೆಚ್ಚು ನಾಗರಿಕರು ರಕ್ತದಾನ ಮಾಡಿದರು. 450 ಕ್ಕಿಂತಲೂ ಮಿಕ್ಕಿ ಸಾರ್ವಜನಿಕರು ಉಚಿತ ಕೋವಿಡ್ ಲಸಿಕೆಯನ್ನು ಪಡೆದರು.
ಶಿಬಿರದಲ್ಲಿ ನಾಗರಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಹನುಮಂತ್ ಕಾಮತ್, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್ ಹಾಗೂ ಹಿತೈಷಿಗಳು, ಗಣ್ಯರು ಪಾಲ್ಗೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!