News Kannada
Monday, September 26 2022

ಮಂಗಳೂರು

ಕೇಸರಿ ಬಗ್ಗೆ ಅವಹೇಳನ, ಕಾಂಗ್ರೆಸ್ ಮುಖಂಡ ಐವನ್ ಡಿಸೋಜ ಮನೆಗೆ ಭಜರಂಗದಳ ಮುತ್ತಿಗೆ ಯತ್ನ - 1 min read

Photo Credit :

ಮಂಗಳೂರು : ಮಾಜಿ ವಿಧಾನಪರಿಷತ್ ಸದಸ್ಯ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗೆ ಐವನ್ ಡಿಸೋಜಾ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಬಜರಂಗದಳದ  ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿವಿ ಮಾಧ್ಯಮದಲ್ಲಿ, ಐವನ್ ಡಿಸೋಜ ಕೇಸರಿ ಶಾಲು ಹಾಕಿದವರು ಟೆರರಿಸ್ಟ  ಹೇಳಿದ್ದಾರೆ ಎನ್ನಲಾಗಿದ್ದು ಈ ಬಗ್ಗೆ ಭಾರೀ ಆಕ್ರೋಶ ಕೇಳಿ ಬಂದಿದೆ .

ಇದಕ್ಕೆ ಪ್ರತೀಕಾರ ತೀರಿಸಲು ಐವನ್ ಡಿಸೋಜ ಅವರ ಮನೆಗೆ ಮುತ್ತಿಗೆ ಹಾಕಿ ಕೇಸರಿ ಬಣ್ಣ ಬಳಿಯಲು ಬಜರಂಗದಳದ ಕಾರ್ಯಕರ್ತರು ಮುಂದಾಗಿದ್ದರು. ಆದರೆ ಮನೆಯ ಆವರಣಕ್ಕೆ ನುಗ್ಗಲು ಯತ್ನಿಸಿದ ಬಜರಂಗದಳದ ಕಾರ್ಯಕರ್ತರು ಪೊಲೀಸರು ತಡೆದಿದ್ದಾರೆ .ಹಲವು ಕಾರ್ಯಕರ್ತರು ರಸ್ತೆಯಲ್ಲಿ ತಡೆದು ವಶಕ್ಕೆ ಪಡೆದ ಪೊಲೀಸರು ಅಲ್ಲಿಂದ ಪಾಂಡೇಶ್ವರ ಠಾಣೆಗೆ ಒಯ್ದಿದ್ದಾರೆ. ಪ್ರಕರಣ ಸಂಬಂಧ ಐವನ್ ಡಿಸೋಜಾ ಬಹಿರಂಗವಾಗಿ ಕ್ಷಮೆ ಕೇಳಬೇಕೆಂದು ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

See also  ಕರಾವಳಿಯಲ್ಲಿ ವರುಣನ ಅಬ್ಬರ: ಮುಂದಿನ 24 ಗಂಟೆ ಆರೆಂಜ್ ಅಲರ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು