News Kannada
Monday, December 05 2022

ಮಂಗಳೂರು

ವಿಶ್ವ ಹಿಂದು ಪರಿಷತ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Photo Credit :
ಬೆಳ್ತಂಗಡಿ : ವಿಶ್ವ ಹಿಂದು ಪರಿಷತ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಅವರು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ ನೀಡಿದರು.
ಶನಿವಾರ ಬೆಳಗ್ಗೆ ವಿಮಾನ ಮೂಲಕ ಮಂಗಳೂರಿಗೆ ಆಗಮಿಸಿದ ಅಲೋಕ್ ಕುಮಾರ್ ಅವರು ಕಾರಿನಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದರು. ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು.
ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿ, ಚರ್ಚಿಸಿದರು. ಕ್ಷೇತ್ರದ ವತಿಯಿಂದ ಡಾ. ಹೆಗ್ಗಡೆಯವರು ಅಲೋಕ್ ಕುಮಾರ್ ಅವರನ್ನು ಗೌರವಿಸಿದರು. ಕ್ಷೇತ್ರದ ಪರವಾಗಿ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಹಾಗೂ ದೇವಳ ಕಚೇರಿ ಪ್ರಬಂಧಕ ಪಾರ್ಶ್ವನಾಥ್ ಜೈನ್ ಸ್ವಾಗತಿಸಿದರು.
ವಿಶ್ವ ಹಿಂದು ಪರಿಷತ್ ಕೇಂದ್ರೀಯ ಸಹ ಪ್ರ.ಕಾರ್ಯದರ್ಶಿ ಕೋಟೇಶ್ವರ ಶರ್ಮ, ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವರಾಜ್, ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ, ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್, ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ. ಪ್ರಸನ್ನ ಕೆ., ಕಾರ್ಯಾಧ್ಯಕ್ಷ ಭಾಸ್ಕರ ಧರ್ಮಸ್ಥಳ, ಕಾರ್ಯದರ್ಶಿ ಸತೀಶ್ ಮೊದಲಾದವರು ಇದ್ದರು.
ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥಸ್ವಾಮಿ ದರ್ಶನ ಹಾಗೂ ಹೆಗ್ಗಡೆಯವರ ಭೇಟಿ ಮುಗಿಸಿ, ಶೃಂಗೇರಿ ಮಠದ ಶ್ರೀಗಳನ್ನು ಭೇಟಿಗೆ ತೆರಳಿದರು. ಅಲ್ಲಿಂದ ಉಡುಪಿ ಮಠಕ್ಕೆ ಭೇಟಿ ನೀಡಲಿದ್ದಾರೆ.

See also  “ದ್ವಾದಶಾನುಪ್ರೇಕ್ಷೆ” ಕೃತಿಯನ್ನು ಆಸಕ್ತರಿಗೆ ಸ್ವಾಧ್ಯಾಯಕ್ಕಾಗಿ ಪ್ರಕಾಶನಗೊಳಿಸಿದ-ಎಮ್. ಜಯಸೇನ ಇಂದ್ರರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು