News Kannada
Sunday, November 27 2022

ಮಂಗಳೂರು

ಬಂಟ್ವಾಳ : ಕ್ಯಾಟರಿಂಗ್ ವಾಹನವೊಂದು ಮರಕ್ಕೆ ಡಿಕ್ಕಿ - 1 min read

acccident
Photo Credit :
ಬಂಟ್ವಾಳ: ಭಾನುವಾರ ಮಧ್ಯಾಹ್ನದ ಬಳಿಕ ನಡೆದ ದಾರುಣ ಘಟನೆಯಲ್ಲಿ ಬಂಟ್ವಾಳ ತಾಲೂಕಿನ ಮಂಗಳೂರು ಬಿ.ಸಿ.ರೋಡ್ ಮಧ್ಯೆ ಬ್ರಹ್ಮರಕೂಟ್ಟು ಸಮೀಪ ರಾಮಲ್ ಕಟ್ಟೆ ಎಂಬಲ್ಲಿ ಕ್ಯಾಟರಿಂಗ್ ವಾಹನವೊಂದು ಮರಕ್ಕೆ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಮತ್ತು ಆಶೀತ್ (21) ಮೃತಪಟ್ಟರೆ, ಸಿಂಚನ್ ಮತ್ತು ಸುದೀಪ್ (ಇಬ್ಬರೂ ಬಂಟ್ವಾಳದವರು) ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ಕ್ಯಾಟರಿಂಗ್ ವೊಂದರ ಆಹಾರ ಸಾಗಾಟ ಮಾಡುತ್ತಿದ್ದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದಿದೆ. ಕ್ಯಾಟರಿಂಗ್ ಕೆಲಸವನ್ನು ಮುಗಿಸಿ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ತಕ್ಷಣ ಗಾಯಾಳುಗಳನ್ನು ಸಮೀಪದ ತುಂಬೆ ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಪ್ರಯೋಜನವಾಗಲಿಲ್ಲ.ಬಂಟ್ವಾಳ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
See also  ಪುನೀತ ನಮನ - ನೆನಪಿನ ದೋಣಿಯಲ್ಲಿ ರಾಜಕುಮಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು