ಉಡುಪಿ: ದಕ್ಷಿಣ ಕನ್ನಡ, ಉಡುಪಿ ಜಂಡಿ ಮತ ಕ್ಷೇತ್ರಗಳಲ್ಲಿ ಪರಿಷತ್ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಂತ ಬಿಜೆಪಿಯ ಹಾಲಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಪರಿಷತ್ ಚುನಾವಣೆ ಮತಎಣಿಕೆ ಆರಂಭವಾದಾಗಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದಂತ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು, ಕೊನೆಗೂ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಇತ್ತ ಚಿಕ್ಕಮಗಳೂರಿನಲ್ಲಿ ತೀವ್ರ ಜಿದ್ಧಾ-ಜಿದ್ದಿಗೆ ಪರಿಷತ್ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರ ಇಂದು ಸಾಕ್ಷಿಯಾಯಿತು. ಕಾಂಗ್ರೆಸ್ ವರ್ಸಸ್ ಬಿಜೆಪಿ ನಡುವೆ ನಡೆದಂತ ಸಖತ್ ಫೈಟ್ ನಲ್ಲಿಯೂ ಅಂತಿಮವಾಗಿ 6 ಮತಗಳ ಅಂತರದಿಂದ ಗೆಲುವನ್ನು ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಸಾಧಿಸಿದ್ದಾರೆ.