ಬಂಟ್ವಾಳ: ತಾಲೂಕಿನ ಕೆದಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕಳೆದೆರಡು ವಾರದಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದೆ ಜನರು ತತ್ತರಿಸುವಂತಾಗಿದೆ ಎಂದು ಇಲ್ಲಿನ ನಾಗರಿಕರು ಬಂಟ್ವಾಳ ತಾಪಂ ಕಾರ್ಯ ನಿರ್ವಹಣಾಧಿಕಾರಿ ಹಾಗೂ ತಹಶೀಲ್ದಾರರಿಗೆ ದೂರು ಸಲ್ಲಿಸಿದ್ದಾರೆ.
ಕೊರೋನ ಸಂಕಷದಟ ಕಾಲದಿಂದಲೂ ಇದುವರೆಗೆ ಬೀಟಿ ಪರಿಸರಕ್ಕೆ ಕುಡಿಯುವ ನೀರು ಪೂರೈಸುವಲ್ಲಿ ಕೆದಿಲ ಗ್ರಾ.ಪಂ. ವಿಫಲವಾಗಿದೆ.ಈ ಬಗ್ಗೆ ಹಲವು ಬಾರಿ ಗ್ರಾ.ಪಂ.ನ ಗಮನಕ್ಕೆ ತಂದರೂ ಸೂಕ್ತ ಸ್ಪಂದನೆಯೇ ಸಿಕ್ಕಿಲ್ಲ ಎಂದು ಇಲ್ಲಿನ ನಾಗರೀಕರು ತಾಪಂ.ಇಒ ಹಾಗೂ ತಹಶೀಲ್ದಾರರಿಗೆ ಸಲ್ಲಿಸಿರುವ ಮನವಿಯಲ್ಲಿ ಆರೋಪಿಸಿದ್ದಾರೆ. ನೀರಿನ ಪೈಪ್ ಲೈನ್ ಗಳ ಅಸಮರ್ಪಕ ಕಾರ್ಯ ನಿರ್ವಹಣೆ ಮತ್ತು ಗ್ರಾಪಂ ನ ನಿಲ೯ಕ್ಷ್ಯ ಧೋರಣೆಯಿಂದಾಗಿ ಈ ಸಮಸ್ಯೆ ಉಂಟಾಗಿದ್ದು,ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.ಮನವಿಯ ಪ್ರತಿಯನ್ನು ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗೂ ರವಾನಿಸಲಾಗಿದೆ.