News Kannada
Sunday, October 02 2022

ಮಂಗಳೂರು

ಮದುವೆ ಸಂಭ್ರಮದಲ್ಲಿ ಕೊರಗಜ್ಜನ ವೇಷ ಧರಿಸಿ ಡ್ಯಾನ್ಸ್ ಮಾಡಿದ ವೀಡಿಯೋ ವೈರಲ್ - 1 min read

Photo Credit :

ಮಂಗಳೂರು: ಮುಸ್ಲಿಂ ಸಮುದಾಯದ ಮದುವೆ ಸಂಭ್ರಮದಲ್ಲಿ ಕೊರಗಜ್ಜನ ವೇಷ ಧರಿಸಿ ಡ್ಯಾನ್ಸ್ ಮಾಡಿದ ವರ ಹಿಂದೂ ಸಂಘಟನೆಗಳ ತೀವ್ರ ಖಂಡನೆ.

ಕೊಳ್ನಾಡ್ ಗ್ರಾಮದ ಅಝೀಜ್ ಎಂಬುವರ ಮಗಳ ಮದುವೆ ದಿನ ಈ ಘಟನೆ ನಡೆದಿದೆ. ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನ ಜೊತೆ ಅಜೀಜ್ ಪುತ್ರಿಯ ಮದುವೆ ಮಧ್ಯಾಹ್ನ ನಡೆದಿದ್ದು ಸಾವಿರಾರು ಜನರಿಗೆ ಔತಣ ಕೂಟವನ್ನು ಏರ್ಪಡಿಸಿದ್ದರು.

ಅದೇ ರೀತಿ ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ಐವತ್ತಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ ಆತಾ ಆಗಮಿಸಿದ್ದಾನೆ . ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಡಿಯುತ್ತಾ ಬಂದಿದ್ದು ತುಳುನಾಡಿನ ಆರಾಧ್ಯ ದೇವರಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಹಚ್ಚಿಸಿಕೊಂಡು ವರ ಆಗಮಿಸಿದ್ದ ಎನ್ನಲಾಗಿದೆ .

ವರ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಸಿಕೊಂಡು ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು ಹಿಂದು ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದೆ ಎನ್ನಲಾಗಿದೆ

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು ಇಂತಹ ಕೃತ್ಯವನ್ನು ಎಸಗಿ ಸಿ ಹಿಂದೂಗಳ ನಂಬಿಕೆಯನ್ನು ಟೀಕಿಸಿದ್ದಾರೆ ಅಷ್ಟೇ ಅಲ್ಲದೆ ಕೊರಗ ಸಮುದಾಯವನ್ನು ಅವಮಾನಿಸಿದ್ದಾರೆ ಈ ಕೃತ್ಯವೆಸಗಿದವರ ಮತ್ತು ಆತನ ಸಂಗಡಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಿಂದೂ ಜಾಗರಣ ವೇದಿಕೆ ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ತೀವ್ರ ಖಂಡಿಸುತ್ತದೆ ಈ ಘಟನೆ ಬಗ್ಗೆ ಸ್ವಯಂಪ್ರೇರಿತ ಕೇಸು ದಾಖಲಿಸಬೇಕು ಇಲ್ಲದಿದ್ದಲ್ಲಿ ಪೋಲಿಸ್ ಠಾಣೆಗೆ ಮುತ್ತಿಗೆ ಹಾಕುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

See also  ಹಿರಿಯ ಸಾಮಾಜಿಕ ನೇತಾರ ಎ.ಸಿ.ಭಂಡಾರಿ ಅವರಿಗೆ ಅಭಿನಂದನೆ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು