News Kannada
Monday, November 28 2022

ಮಂಗಳೂರು

ಚಾರ್ಮಾಡಿ ಅಭಿವೃದ್ಧಿಗೆ 18 ಕೋಟಿ ರೂ. ಬಿಡುಗಡೆ, ಶೀಘ್ರದಲ್ಲಿ ಕಾಮಗಾರಿ ಆರಂಭ : ಸಚಿವ ಸಿ.ಸಿ.ಪಾಟೀಲ್ - 1 min read

Photo Credit :

ಬೆಳ್ತಂಗಡಿ: ಶಿರಾಡಿ ಘಾಟಿ ಅಭಿವೃದ್ಧಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಶೀಘ್ರ ಆರಂಭವಾಗಲಿದೆ. ಕಾಮಗಾರಿಗಾಗಿ ಆರು ತಿಂಗಳು ಘಾಟಿ ಮುಚ್ಚುವ ಕುರಿತು ತಾಂತ್ರಿಕ ವರದಿ ಬಂದಿದೆ.

ಈ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹೆಚ್ಚಿನ ಆದ್ಯತೆ ನೀಡಿ, ಕಡಿಮೆ ಕಾಲಾವಕಾಶದಲ್ಲಿ ಮುಗಿಸಿ, ಸಾರ್ವಜನಿಕರ ಸಂಚಾರಕ್ಕೆ ಹೆಚ್ಚು ಸಮಯದ ತೊಂದರೆಯಾಗದಂತೆ ಪರಿಶೀಲನೆ ನಡೆಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು. ಅವರು ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.

ಚಾರ್ಮಾಡಿ ಅಭಿವೃದ್ಧಿಗೆ 18 ಕೋಟಿ ರೂ.
ಕೇಂದ್ರ ಸಚಿವ ನಿತಿನ್ ಗಡ್ಕರಿ ರಸ್ತೆ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಿ ಕ್ರಾಂತಿಯನ್ನುಂಟು ಮಾಡಿದ್ದಾರೆ. ಕರ್ನಾಟಕದಲ್ಲಿ ಹಲವಾರು ರಸ್ತೆಗಳನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲಾಗುವುದು.

ಚಾರ್ಮಾಡಿ ಘಾಟಿ ಪರಿಸರದಲ್ಲಿ ಸುಮಾರು 9 ಕಡೆ ಭೂಕುಸಿತ ಪ್ರದೇಶಗಳನ್ನು ಗುರುತಿಸಲಾಗಿದೆ.ಇಲ್ಲಿನ ಅಭಿವೃದ್ಧಿಗೆ 18 ಕೋಟಿ ರೂ. ಬಿಡುಗಡೆಗೊಂಡಿದ್ದು, ಟೆಂಡರ್ ಪ್ರಕ್ರಿಯೆ ಶೀಘ್ರ ನಡೆದು ಕಾಮಗಾರಿ ಆರಂಭವಾಗಲಿದೆ ಎಂದು ಸಚಿವರು ಹೇಳಿದರು.

See also  ಮಂಗಳೂರು: ತ್ರಿಕೋನ ಪ್ರೇಮ ಪ್ರಕರಣದಲ್ಲಿ ಯುವಕನ ದಾರುಣ ಅಂತ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು