ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 888 ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. 904 ಮಂದಿ ಗುಣಮುಖರಾಗಿದ್ದಾರೆ.
ಬುಧವಾರ ಜಿಲ್ಲೆಯಲ್ಲಿ ಕೊರೋನಾದಿಂದ ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 9.42 ದಾಖಲಾಗಿದೆ. ಜಿಲ್ಲೆಯಲ್ಲಿ ಬುಧವಾರ ಮೂರು ಕ್ಲಸ್ಟರ್ ಪ್ರಕರಣ ಗುರುತಿಸಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ129934 ಕ್ಕೆ ಏರಿಕೆಯಾಗಿದೆ. ಈ ಪೈಕಿ 5325 ಸಕ್ರಿಯ ಪ್ರಕರಣಗಳು. 122878 ಮಂದಿ ಗುಣಮುಖರಾಗಿದ್ದಾರೆ. 1731 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.