News Kannada
Thursday, October 06 2022

ಮಂಗಳೂರು

ರಾಜ್ಯಾದ್ಯಂತ ಗದ್ದಲ ಹಿನ್ನೆಲೆ: ನಾಗರಿಕರಲ್ಲಿ ವಿಶ್ವಾಸ ತುಂಬಲು ಮಂಗಳೂರು ಪೊಲೀಸರಿಂದ ಪಥಸಂಚಲನ - 1 min read

Photo Credit : R Bhat

ಮಂಗಳೂರು : ನಗರ ಪೊಲೀಸರು ಫೆ.21ರ ಸೋಮವಾರ ಬೆಳಗ್ಗೆ ನಗರದಲ್ಲಿ ಪಥಸಂಚಲನ ನಡೆಸಿದರು.

ಪೊಲೀಸ್ ಕಮಿಷನರ್ ಎನ್. ಶಶಿ ಕುಮಾರ್ ನೇತೃತ್ವದಲ್ಲಿ ನಗರದ ಬಳ್ಳಾಲ್‌ಬಾಗ್‌ನಿಂದ ಬೆಳಿಗ್ಗೆ 8 ಗಂಟೆಗೆ ಆರಂಭವಾದ ಪಥಸಂಚಲನ ಪಿವಿಎಸ್, ಎಂಜಿ ರಸ್ತೆ, ಅಂಬೇಡ್ಕರ್ ವೃತ್ತ, ಹಂಪನಕಟ್ಟೆ ಸೇರಿದಂತೆ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕೊನೆಗೊಂಡಿತು.

ಶಿವಮೊಗ್ಗದಲ್ಲಿ ಭಾನುವಾರ ಫೆ.20ರಂದು ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಹಾಗೂ ರಾಜ್ಯಾದ್ಯಂತ ನಡೆಯುತ್ತಿರುವ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ನಾಗರಿಕರಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಪಥಸಂಚಲನ ನಡೆಸಲಾಯಿತು.

ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ನಡೆಯುತ್ತಿರುವ  ಸೂಕ್ಷ್ಮ ಬೆಳವಣಿಗೆಗಳಿಂದ ಜನರು ಗೊಂದಲ ಮತ್ತು ಆತಂಕಕ್ಕೆ ಒಳಗಾಗಿರುವ ಕಾರಣ ನಾಗರಿಕರಿಗೆ ನೈತಿಕ ಸ್ಥೈರ್ಯ ತುಂಬುವ ಸಲುವಾಗಿ ಹಾಗೂ ಶಾಲಾ ಕಾಲೇಜುಗಳ ಪರಿಸರದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಪಥಸಂಚಲನವನ್ನು ಆಯೋಜಿಸಲಾಗಿತ್ತು ಎಂದು ಪೊಲೀಸ್ ಕಮಿಷನರ್ ಎನ್. ಶಶಿ ಕುಮಾರ್ ನ್ಯೂಸ್ ಕನ್ನಡಕ್ಕೆ  ತಿಳಿಸಿದರು.

ಪಥಸಂಚಲನದ ಅರಿವು ಇಲ್ಲದೇ ಮಂಗಳೂರು ನಗರದ ಬಹುತೇಕ ಕಡೆಗಳಲ್ಲಿ ಬೆಳಿಗ್ಗೆ ಸಂಚಾರ ದಟ್ಟಣೆ ಉಂಟಾಯಿತು. ಅನೇಕ ಕಡೆಗಳಲ್ಲಿ ಪಥ ಸಂಚಲನದ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆ ಕೂಡಾ ಮಾಡಲಾಗಿತ್ತು.

See also  ಬೆಳ್ತಂಗಡಿ: ಗಾಯಗೊಂಡಿದ್ದ ಜಿಂಕೆ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು