News Kannada
Sunday, September 25 2022

ಮಂಗಳೂರು

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ದೇಶಕ್ಕೆ ಮಾಡಿದ ಅವಮಾನ : ನಳಿನ್ ಕುಮಾರ್ ಕಟೀಲು - 1 min read

Photo Credit : News Kannada

ಮಂಗಳೂರು: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವಲ್ಲಿ ಸರಕಾರ ಬೇಜವಾಬ್ದಾರಿ ತೋರಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ದೇಶಕ್ಕೆ ಮಾಡಿದ ಅವಮಾನ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಚಾರದಲ್ಲಿ ಸಿದ್ದರಾಮಯ್ಯ ಅವರೇ ಬೇಜವಾಬ್ದಾರಿ ವರ್ತನೆ ತೋರಿದ್ದಾರೆ.

ಉಕ್ರೇನ್‌ನಲ್ಲಿರುವ ಭಾರತೀಯರನ್ನು ಕರೆತರಲು ಪ್ರಧಾನಿ ನರೇಂದ್ರ ಮೋದಿ ಅವರೇ ನೇತೃತ್ವ ವಹಿಸಿದ್ದು, ನಾಲ್ವರು ಸಚಿವರನ್ನು ಈ ಕಾರ್ಯಕ್ಕೆ ನಿಯೋಜಿಸಿದ್ದಾರೆ.

ಆದರೆ, ಸಿದ್ದರಾಮಯ್ಯ ಅವರು ಈ ವಿಷಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಪ್ರತಿಪಕ್ಷ ನಾಯಕನಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಹಿರಿತನ ಹೊಂದಿದ್ದಾರೆ. ವಿರೋಧ ಮಾಡುವುದೇ ವಿರೋಧ ಪಕ್ಷದ ನಾಯಕನ ಕೆಲಸ ಎಂಬಂತೆ ವರ್ತಿಸುತ್ತಿದ್ದಾರೆ. ಎಲ್ಲದಕ್ಕೂ ವಿರೋಧ ಮಾತನಾಡುತ್ತಿದ್ದಾರೆ. ಅವರ ಈ ವರ್ತನೆ ಸರಿಯಲ್ಲ ಎಂದರು.

See also  ಬೆಳ್ತಂಗಡಿ ಪಟ್ಟಣ ಪಂಚಾಯತ್ ವತಿಯಿಂದ ವಿವಿಧ ಯೋಜನೆಗಳಡಿ ಮನೆ ದುರಸ್ತಿ, ಅಂಗವಿಕಲರಿಗೆ ಸಹಾಯಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು