News Kannada
Monday, September 26 2022

ಮಂಗಳೂರು

ಅಪ್ರಾಪ್ತ ಬಾಲಕಿಯ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಕನ್ಯಾನದ ಯುವಕನ ಬಂಧನ - 1 min read

Photo Credit : News Kannada

ವಿಟ್ಲ: ಕನ್ಯಾನ ಎಂಬಲ್ಲಿ ಕೂಲಿ ಕಾರ್ಮಿಕರಾದ ಸಂಜೀವ ಎಂಬವರ ಅಪ್ರಾಪ್ತ ವಯಸ್ಸಿನ ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಸಾಹುಲ್‌ ಹಮೀದ್‌ ಯಾನೆ ಕುಟ್ಟ ಎಂಬಾತನನ್ನು ವಿಟ್ಲ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಕಣಿಯೂರು ಮಸೀದಿಯ ಹಿಂಭಾಗದ ಸುಲೈಮಾನ್‌ ಫೈಝಿ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿರುವ ದಲಿತ ಸಮುದಾಯಕ್ಕೆ ಸೇರಿದ ಕೂಲಿ ಕಾರ್ಮಿಕ ಸಂಜೀವ ಎಂಬವರ ಅಪ್ರಾಪ್ತ ವಯಸ್ಸಿನ ಪುತ್ರಿ ಮೇ 4ರಂದು ಬೆಳಗ್ಗೆ 11.15ರ ವೇಳೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯ ನಡುವಿನ ಕೋಣೆಯಲ್ಲಿ ಪತ್ತೆಯಾಗಿದ್ದಳು. ಸಾಹುಲ್‌ ಹಮೀದ್‌ ಎಂಬಾತ ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿರುವುದಾಗಿ ಆರೋಪಿಸಿ ಬಾಲಕಿಯ ತಂದೆ ದೂರು ನೀಡಿದ್ದು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ತಲೆಮರೆಸಿಕೊಂಡಿರುವ ಆರೋಪಿ ಕಣಿಯೂರು ತಲೆಕ್ಕಿ ನಿವಾಸಿ ಸಾಹುಲ್‌ ಹಮೀದ್‌ ಎಂಬಾತನ ಪತ್ತೆಗೆ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್‌ ಉಪಾಧೀಕ್ಷಕ ಶಿವಾಂಶು ರಜಪೂತ್‌ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಲಾಗಿತ್ತು. ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿಂದ ರಾತ್ರಿ ಆರೋಪಿಯನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿದೆ.

See also  ಉಡುಪಿ: ಕಾರಿಗೆ ಬೆಂಕಿ ಹಚ್ಚಿಕೊಂಡು ದಂಪತಿ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು