News Kannada
Friday, October 07 2022

ಮಂಗಳೂರು

ಚಾರ್ಮಾಡಿ: ಟ್ರಕ್ ಮೈಮೇಲೆ ಹರಿದು ಯುವಕ ಸ್ಥಳದಲ್ಲೇ ಸಾವು - 1 min read

Photo Credit :

ಬೆಳ್ತಂಗಡಿ: ಚಾರ್ಮಾಡಿ ಪಾಂಡಿಕಟ್ಟೆ ಎಂಬಲ್ಲಿ ಬೈಕ್‌ಗಳ ಮಧ್ಯೆ ನಡೆದ ಅಪಘಾತದ ವೇಳೆ ರಸ್ತೆಗೆ ಎಸೆಯಲ್ಪಟ್ಟ ಸವಾರನ ಮೇಲೆ ಹಿಂಬದಿಯಿಂದ ಬಂದ ಟ್ರಕ್ ಹರಿದು ಸ್ಥಳೀಯ ಇಪ್ಪತ್ತೊಂದರ ಹರೆಯದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾತ್ರಿ ವೇಳೆ ನಡೆದಿದೆ.

ಮೃತ ಯುವಕ ಚಾರ್ಮಾಡಿ ಮೇಗಿನಮನೆ ಇಸ್ಮಾಯಿಲ್ ಅವರ ಪುತ್ರನಾಗಿದ್ದಾರೆ.

ಚಾರ್ಮಾಡಿ ಸಮೀಪ ತನ್ನ ಸ್ನೇಹಿತನ ಮನೆಗೆಂದು ತೆರಳಿ ಹಿಂದಿರುಗುತ್ತಿದ್ದ ವೇಳೆ ಎದುರು ಬದಿಯಿಂದ ಬರುತ್ತಿದ್ದ ಬೈಕ್ ಗೆ ಇವರು ಪ್ರಯಾಣಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದ್ದು, ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಅವರ ಮೇಲೆ ಹಿಂದಿನಿಂದ ಬರುತ್ತಿದ್ದ ಟ್ರಕ್ ಹರಿದು ಈ ಅವಘಡ ಸಂಭವಿಸಿದೆ.

ಅಪಘಾತದ ವಿವರ ಅರಿಯುತ್ತಿದ್ದಂತೆ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿದ್ದರು. ವಿವರ ಅರಿತ ಬೆಳ್ತಂಗಡಿ ಸಂಚಾರಿ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಅಗತ್ಯ ಕಾನೂನು ಕ್ರಮ ಜರುಗಿಸಿದ್ದಾರೆ.

ನಝೀರ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು ತಂದೆ, ತಾಯಿ ಹಾಗೂ ಓರ್ವ ಸಹೋದರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

See also  ಹೆದ್ದಾರಿ ಅಪಘಾತ ತಡೆಗೆ ಮನವಿ ಸಲ್ಲಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು