News Kannada
Thursday, September 29 2022

ಮಂಗಳೂರು

ಬಂಟ್ವಾಳ: ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ - 1 min read

Photo Credit :
ಬಂಟ್ವಾಳ: ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ನಡೆದಿದೆ. ಮೃತರನ್ನು ವಿಟ್ಲ ಚಂದಳಿಕೆ ಮಾಡತ್ತಡ್ಕ ನಿವಾಸಿ ಜಯಕರ(೩೫) ಎಂದು ಗುರುತಿಸಲಾಗಿದೆ.
ಜಯಕರ ರವರು ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದು, ಇಂದು ಮುಂಜಾನೆಯಿಂದ ಕಾಣೆಯಾಗಿದ್ದರು, ಈ ಬಗ್ಗೆ ಅವರ ಮನೆಯವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಆದರೆ ಸಂಜೆ ಅವರ ಮೃತದೇಹ ಮಾಡತ್ತಡ್ಕ ಸಮೀಪ ಗುಡ್ಡದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

See also  ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿಕಪ್ ವಾಹನ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಯುವಕರು ಮೃತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು